Petrol Diesel Price on January 08: ಮಹಾರಾಷ್ಟ್ರ, ಗೋವಾದಲ್ಲಿ ಇಂಧನ ದರ ಕೊಂಚ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.81 ರೂ. ಇದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.23 ರೂ. ಇದೆ.

Petrol Diesel Price on January 08: ಮಹಾರಾಷ್ಟ್ರ, ಗೋವಾದಲ್ಲಿ ಇಂಧನ ದರ ಕೊಂಚ ಇಳಿಕೆ
ಪೆಟ್ರೋಲ್
Image Credit source: The Digit Insurance

Updated on: Jan 08, 2025 | 7:08 AM

ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.80 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಇಂದು ಪೆಟ್ರೋಲ್ ಲೀಟರ್‌ಗೆ 19 ಪೈಸೆ ಇಳಿಕೆಯಾಗಿ 94.42 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 22 ಪೈಸೆ ಇಳಿಕೆಯಾಗಿ 87.47 ರೂ. ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 104.27 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 90.80 ರೂ.ಗೆ ತಲುಪಿದೆ.

ಛತ್ತೀಸ್‌ಗಢ, ಗೋವಾ, ಗುಜರಾತ್, ಹರಿಯಾಣ, ರಾಜಸ್ಥಾನ, ತಮಿಳುನಾಡು ಮತ್ತು ತ್ರಿಪುರಾದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾಗಿದೆ. ಮತ್ತೊಂದೆಡೆ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಒಡಿಶಾ, ಪುದುಚೇರಿ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 76.12 ಡಾಲರ್​ ಆಗಿದೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.33 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us