Petrol Diesel Price on September 24: 74 ಡಾಲರ್​ ದಾಟಿದ ಕಚ್ಚಾತೈಲ, ಅಸ್ಸಾಂ, ಮೇಘಾಲಯದಲ್ಲಿ ಇಂಧನ ಬೆಲೆ ಅಗ್ಗ

|

Updated on: Sep 24, 2024 | 7:14 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 24, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.84 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.37 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on September 24: 74 ಡಾಲರ್​ ದಾಟಿದ ಕಚ್ಚಾತೈಲ, ಅಸ್ಸಾಂ, ಮೇಘಾಲಯದಲ್ಲಿ ಇಂಧನ ಬೆಲೆ ಅಗ್ಗ
ಪೆಟ್ರೋಲ್
Image Credit source: HT Auto
Follow us on

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.84 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.37 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಆದರೆ ಕಚ್ಚಾತೈಲ ಬೆಲೆಯ ಏರಳಿತ ಭಾರತದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. iದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಮತ್ತಷ್ಟು ಓದಿ: Petrol Diesel Price on September 23: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದಲ್ಲಿ ಇಂಧನ ದರ ಸ್ಥಿರ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ (IOCL) ಗ್ರಾಹಕರು RSP ಕೋಡ್ ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ಬಿಹಾರ, ಗೋವಾ ಮತ್ತು ಗುಜರಾತ್ ನಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಮತ್ತೊಂದೆಡೆ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಮೇಘಾಲಯ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

– ಗುರುಗ್ರಾಮ್‌ನಲ್ಲಿ ಪೆಟ್ರೋಲ್ 94.94 ರೂ ಮತ್ತು ಡೀಸೆಲ್ ಲೀಟರ್‌ಗೆ 87.80 ರೂ ಆಗಿದೆ.

– ಗೌತಮ್ ಬುದ್ಧ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.65 ರೂ ಮತ್ತು ಡೀಸೆಲ್ 87.75 ರೂ ಆಗಿದೆ.

– ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 94.65 ರೂ ಮತ್ತು ಡೀಸೆಲ್ ರೂ 87.76 ಆಗಿದೆ.

ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.88 ರೂ ಮತ್ತು ಡೀಸೆಲ್ 90.36 ರೂ ಆಗಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 102.86 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 88.94 ರೂ. ಇದೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ