AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on July 09: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ? ಇಲ್ಲಿದೆ ಮಾಹಿತಿ

ಪ್ರತಿದಿನ ಬೆಳಿಗ್ಗೆ, ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ತೈಲ ಕಂಪನಿಗಳು ನಿರ್ಧರಿಸುತ್ತವೆ ಮತ್ತು ಬಿಡುಗಡೆ ಮಾಡುತ್ತವೆ. ಮಂಗಳವಾರ, 9 ಜುಲೈ 2024 ರಂದು, ಪ್ರತಿ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಇಂಧನ ಬೆಲೆ ವಿವರ ಇಲ್ಲಿದೆ.

Petrol Diesel Price on July 09: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 09, 2024 | 8:47 AM

Share

ಸರ್ಕಾರಿ ತೈಲ ಕಂಪನಿಗಳು ಇಂದು ಜುಲೈ 09, ಮಂಗಳವಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಗಳನ್ನು ನಿರ್ಧರಿಸಲಾಗುತ್ತದೆ.

ಮಹಾನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ? ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ., ಮುಂಬೈನಲ್ಲಿ 104.21 ರೂ., ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ಗೆ 103.94 ರೂ., ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಚೆನ್ನೈನಲ್ಲಿ 100.75 ರೂ. ಇದೆ.

ಡೀಸೆಲ್ ಬೆಲೆ: ದೆಹಲಿಯಲ್ಲಿ 87.62 ರೂ., ಮುಂಬೈನಲ್ಲಿ 92.15 ರೂ., ಕೋಲ್ಕತ್ತಾದಲ್ಲಿ 90.76 ರೂ., ಚೆನ್ನೈನಲ್ಲಿ 92.43 ರೂ., ಬೆಂಗಳೂರಿನಲ್ಲಿ ಡೀಸೆಲ್ ದರ 88.94 ರೂ. ಇದೆ. ಭಾರತದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ಬಿಡುಗಡೆ ಮಾಡುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾ : ಪ್ರತಿ ಲೀಟರ್ ಪೆಟ್ರೋಲ್ ರೂ 94.83ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.96 ರೂ

ಗುರುಗ್ರಾಮ : ಪ್ರತಿ ಲೀಟರ್ ಪೆಟ್ರೋಲ್ 94.79 ರೂ ಮತ್ತು ಡೀಸೆಲ್ ಲೀಟರ್‌ಗೆ 87.64 ರೂ.

ಚಂಡೀಗಢ : ಲೀಟರ್‌ಗೆ ಪೆಟ್ರೋಲ್‌ 94.24ರೂ. ಮತ್ತು ಡೀಸೆಲ್‌ 82.40ರೂ.

ಹೈದರಾಬಾದ್ : ಪೆಟ್ರೋಲ್ ಲೀಟರ್‌ಗೆ 107.41ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ : ಪ್ರತಿ ಲೀಟರ್ ಪೆಟ್ರೋಲ್ ರೂ 105.71 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 91.10

ಪಾಟ್ನಾ : ಪ್ರತಿ ಲೀಟರ್ ಪೆಟ್ರೋಲ್ 105.18 ರೂ.ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.04 ರೂ.

ಲಕ್ನೋ : ಪೆಟ್ರೋಲ್ ಪ್ರತಿ ಲೀಟರ್‌ಗೆ 94.65ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.

ಪುಣೆ : ಪೆಟ್ರೋಲ್ ಪ್ರತಿ ಲೀಟರ್‌ಗೆ 104.08 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.61 ರೂ.

ರಾಜ್ಯ ಮಟ್ಟದಲ್ಲಿ ಪೆಟ್ರೋಲ್​ಗೆ ವಿಧಿಸಲಾದ ತೆರಿಗೆಯಿಂದಾಗಿ, ವಿವಿಧ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಭಿನ್ನವಾಗಿವೆ. ನಿಮ್ಮ ಫೋನ್​ನಿಂದ ಎಸ್​ಎಂಎಸ್​ ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ತಿಳಿದುಕೊಳ್ಳಬಹುದು. ಇದಕ್ಕಾಗಿ ಇಂಡಿಯನ್ ಆಯಿಲ್ ಗ್ರಾಹಕರು ಆರ್​ಎಸ್​ಪಿ ಕೋಡ್ ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ