Petrol Diesel Price on November 11: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 11, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 73.87 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.38 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on November 11: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪೆಟ್ರೋಲ್Image Credit source: The Financial Express
Follow us
|

Updated on:Nov 11, 2024 | 7:14 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 73.87 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.38 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ. ಕಚ್ಚಾತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ರಾಷ್ಟ್ರೀಯ ತೈಲ ಕಂಪನಿಗಳು ಪ್ರತಿದಿನ ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 102.92 ರೂ. ಆದರೆ ಡೀಸೆಲ್ ದರ ಲೀಟರ್‌ಗೆ 88.99 ರೂ. ಚಂಡೀಗಢದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 94.30 ರೂ ಮತ್ತು ಡೀಸೆಲ್ ದರ ಲೀಟರ್‌ಗೆ 82.45 ರೂ ಆಗಿದೆ.

ಇಂದು ಉತ್ತರ ಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಸರಾಸರಿ 95.50 ರೂ.ಗೆ ಮಾರಾಟವಾಗುತ್ತಿದೆ. ಆದರೆ ಡೀಸೆಲ್‌ನ ಸರಾಸರಿ ಬೆಲೆ ಲೀಟರ್‌ಗೆ 88 ರೂ ಇದೆ.

ಇಂದು ಹರಿದ್ವಾರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.65 ರೂ . ಇಂದು ಗೋರಖ್‌ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.11 ರೂ. ಇಂದು ಅಲಹಾಬಾದ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.34 ರೂ. ಇಂದು ಧಲೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.28 ರೂ. ಇಂದು ವಾರಂಗಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 107.05 ರೂ. ಇಂದು ಚಿತ್ತೋಡಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.62 ರೂ. ಇಂದು ಲುಧಿಯಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.25 ರೂ.  ಇದೆ.

ಮತ್ತಷ್ಟು ಓದಿ: ಕಚ್ಚಾತೈಲ ಬೆಲೆ ಏರಿಕೆ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ದರ ಸ್ಥಿರ

ಇಂದು ಪುದುಚೇರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.26 ರೂ. ಇಂದು ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.97 ರೂ. ಇಂದು ಕೊಹಿಮಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.75 ರೂ. ಇಂದು ಲುಂಗ್ಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.67 ರೂ. ಇಂದು ಶಿಲ್ಲಾಂಗ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.17 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:12 am, Mon, 11 November 24