Petrol Diesel Price on November 29: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 29, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 26 ಪೈಸೆ ಏರಿಕೆಯಾಗಿ 104.37 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 24 ಪೈಸೆ ಏರಿಕೆಯಾಗಿ 90.89 ರೂ.ಗೆ ತಲುಪಿದೆ.

Petrol Diesel Price on November 29: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ Image Credit source: Zee Business
Follow us
ನಯನಾ ರಾಜೀವ್
|

Updated on: Nov 29, 2024 | 7:12 AM

ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಬದಲಾಯಿಸಿವೆ. ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದ್ದು, ಅನೇಕ ನಗರಗಳಲ್ಲಿ ಅವುಗಳ ಬೆಲೆ ಹೆಚ್ಚಾಗಿದೆ. ಯುಪಿಯಲ್ಲಿ ಪೆಟ್ರೋಲ್ ಲೀಟರ್‌ಗೆ 25 ಪೈಸೆ ಏರಿಕೆಯಾಗಿ 94.73 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 29 ಪೈಸೆ ಏರಿಕೆಯಾಗಿ 87.83 ರೂ.ಗೆ ತಲುಪಿದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 26 ಪೈಸೆ ಏರಿಕೆಯಾಗಿ 104.37 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 24 ಪೈಸೆ ಏರಿಕೆಯಾಗಿ 90.89 ರೂ.ಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 73.28 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.76 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.95 ರೂ. ಇದೆ.ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್