Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್​ ದರ ಎಷ್ಟಿದೆ ನೋಡಿ

Fuel Rate Today, 04-12-2021: ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದ ಬೆನ್ನಲ್ಲೇ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​-ಡೀಸೆಲ್​ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.  ಹೀಗಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ.

Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್​ ದರ ಎಷ್ಟಿದೆ ನೋಡಿ
ಸಾಂದರ್ಭಿಕ ಚಿತ್ರ

Petrol Diesel Price Today |ಕೊರೊನಾದ ಹೊಸ ರೂಪಾಂತರ ವೈರಸ್​ ಒಮಿಕ್ರಾನ್​​ನಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತಲೈದ ಬೆಲೆ ನಿನ್ನೆ ಇಳಿಕೆಯಾಗಿದೆ. ಹಾಗಂತ ದೇಶಾದ್ಯಂತ ಇನ್ನೂ ಪೆಟ್ರೋಲ್-ಡೀಸೆಲ್​ ದರ ಇಳಿಕೆಯಾಗಿಲ್ಲ. ಸತತ ಒಂದು ತಿಂಗಳಿಂದಲೂ ವಾಹನಗಳ ಇಂಧನ ದರ ಸ್ಥಿರವಾಗಿಯೇ ಇದೆ. ಕಳೆದ ತಿಂಗಳು ಅಂದರೆ ನವೆಂಬರ್​ 4ರಂದು ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಬದಲಾವಣೆಯಾಗಿತ್ತು. ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ದೇಶದಲ್ಲಿ ಅದಾಗಲೇ ಗಗನಕ್ಕೇರಿದ್ದ ಇಂಧನಗಳ ಬೆಲೆ ತಗ್ಗಿತ್ತು. ಅಂದಿನಿಂದಲೂ ರಾಷ್ಟ್ರಾದ್ಯಂತ ತೈಲ ಬೆಲೆ ಸ್ಥಿರವಾಗಿಯೇ ಇದೆ. ಇತ್ತೀಚೆಗೆ ದೆಹಲಿ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ ಕಡಿತಗೊಳಿಸಿದ್ದರಿಂದ ಅಲ್ಲಿ 103 ರೂ.ಇದ್ದ ದರ 95 ರೂ.ಗೆ ಇಳಿಕೆಯಾಗಿದೆ.  

ಪೆಟ್ರೋಲ್​-ಡೀಸೆಲ್​ ದರದಲ್ಲಿ ಇಳಿಕೆ? ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದ ಬೆನ್ನಲ್ಲೇ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​-ಡೀಸೆಲ್​ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.  ಹೀಗಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇದೇ ವೇಳೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿದೆ. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ.ಕಡಿಮೆಯಾಗಿದೆ.  ಹಾಗಿದ್ದಾಗ್ಯೂ ಒಂದು ಪ್ರಶ್ನೆ ಎದ್ದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಿದ್ದಂತೆ ತಕ್ಷಣವೇ ಭಾರತದ ತೈಲ ಕಂಪನಿಗಳೂ ಬೆಲೆ ಏರಿಸುತ್ತವೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದ ತಕ್ಷಣ ಇವರೂ ಯಾಕೆ ಕಡಿಮೆ ಮಾಡುವುದಿಲ್ಲ ಎಂಬುದು ಪ್ರಶ್ನೆ. ಇದಕ್ಕೆ ಈ ಹಿಂದೊಮ್ಮೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಉತ್ತರ ನೀಡಿದ್ದರು. ಭಾರತದ ತೈಲ ಕಂಪನಿಗಳು 15ದಿನಗಳ ಪ್ರತಿದಿನದ ಬೆಲೆಯ ಸರಾಸರಿಯ ಫಾರ್ಮುಲಾದಡಿ ಬೆಲೆ ನಿಗದಿಪಡಿಸಬೇಕಾಗುತ್ತದೆ. ಹೀಗಾಗಿ ತಕ್ಷಣವೇ ಬದಲಾವಣೆ ಆಗುವುದಿಲ್ಲ ಎಂದಿದ್ದರು.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ? ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ. ರಾಷ್ಟ್ರದ ಸುಮಾರು 27 ಮಹಾನಗರಗಳಲ್ಲಿ ಪೆಟ್ರೋಲ್​ ದರ 100 ರೂ.ಗಡಿ ದಾಟಿದೆ.

ಇದನ್ನೂ ಓದಿ: 

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Click on your DTH Provider to Add TV9 Kannada