Petrol Diesel Price on September 29: ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದುಬಾರಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 29, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

Petrol Diesel Price on September 29: ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದುಬಾರಿ
ಪೆಟ್ರೋಲ್Image Credit source: The Stateman
Follow us
|

Updated on: Sep 29, 2024 | 7:47 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ದೀರ್ಘಕಾಲದಿಂದ ರಾಷ್ಟ್ರಮಟ್ಟದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ರಾಜ್ಯ ಮಟ್ಟದಲ್ಲಿ ಬೆಲೆಯಲ್ಲಿ ಕೊಂಚ ಬದಲಾವಣೆ ಕಂಡುಬರುತ್ತಿದೆ. ವಿವಿಧ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಇಲ್ಲಿದೆ ಮಾಹಿತಿ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ನವೀಕರಿಸುತ್ತವೆ.

ಮತ್ತಷ್ಟು ಓದಿ: Petrol Diesel Price on September 27: ಆಂಧ್ರಪ್ರದೇಶ, ಕೇರಳದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ, ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ಬಿಹಾರ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಅದೇ ಸಮಯದಲ್ಲಿ, ಇಂದು ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಡೀಸೆಲ್ ದರಗಳು ಅಗ್ಗವಾಗಿವೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 48 ಪೈಸೆ ಏರಿಕೆಯಾಗಿ 107.60 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 45 ಪೈಸೆ ಏರಿಕೆಯಾಗಿ 94.29 ರೂ. ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 15 ಪೈಸೆ ಏರಿಕೆಯಾಗಿ 104.59 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 15 ಪೈಸೆ ಏರಿಕೆಯಾಗಿ 91.11 ರೂ.ಗೆ ತಲುಪಿದೆ. ಯುಪಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 13 ಪೈಸೆ ಏರಿಕೆಯಾಗಿ 94.57 ರೂ.ಗೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 15 ಪೈಸೆ ಏರಿಕೆಯಾಗಿ 87.64 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86ರೂ., ಡೀಸೆಲ್ 88.94 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ