Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 09, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಾಣುತ್ತಿದೆ. ದೇಶಾದ್ಯಂತ ಇಂಧನ ಬೆಲೆ ಸ್ಥಿರವಾಗಿದೆ.

Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ
ಪೆಟ್ರೋಲ್Image Credit source: Reuters
Follow us
ನಯನಾ ರಾಜೀವ್
|

Updated on: Sep 09, 2024 | 7:08 AM

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 71.06 ಡಾಲರ್​ ಆಗಿದ್ದು, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 67.67 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.76 ರೂ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.84 ರೂ.,ಡೀಸೆಲ್ ದರ 88.95 ರೂ. ಇದೆ.

ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಇಂದು ಡೀಸೆಲ್ ಬೆಲೆ ಎಷ್ಟು?

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.14 ರೂ. ಇಂದು ಗಯಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.55 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.24 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.56 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.52 ರೂ. ಇಂದು ಪಟಾನ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.48 ರೂ. ಇಂದು ಕರ್ನಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.68 ರೂ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.86 ರೂ. ಇದೆ.

ಮತ್ತಷ್ಟು ಓದಿ: Petrol Diesel Price on September 08: ನಿರಂತರ ಇಳಿಕೆ ಕಾಣುತ್ತಿರುವ ಕಚ್ಚಾತೈಲ ಬೆಲೆ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು. ಇದಕ್ಕಾಗಿ ಇಂಡಿಯನ್ ಆಯಿಲ್ (IOCL) ಗ್ರಾಹಕರು RSP ಕೋಡ್ ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ