AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸೆಪ್ಟೆಂಬರ್​ ತಿಂಗಳ ಆರಂಭದ ದಿನದಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 15 ಪೈಸೆ ಇಳಿಕೆ!

Petrol Rate Today: ಸರ್ಕಾರಿ ತೈಲ ಕಂಪನಿಗಳು ಇಂಧನ ದರದಲ್ಲಿ 15 ಪೈಸೆ ಇಳಿಕೆ ಮಾಡಿವೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Petrol Price Today: ಸೆಪ್ಟೆಂಬರ್​ ತಿಂಗಳ ಆರಂಭದ ದಿನದಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 15 ಪೈಸೆ ಇಳಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 01, 2021 | 7:54 AM

Share

Petrol Diesel Price Today | ದೆಹಲಿ: ಕಳೆದ ಒಂದು ವಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಹಿಂದಿನ ವಾರದಲ್ಲಿ ಮಂಗಳವಾರ ತೈಲ ದರದಲ್ಲಿ ಕೊಂಚ ಇಳಿಕೆ ಮಾಡಲಾಗಿತ್ತು. ಆ ಬಳಿಕ ಯಾವುದೇ ಬದಲಾವಣೆಗಳು ಕಂಡು ಬಂದಿರಲಿಲ್ಲ. ಇಂದು ( ಸೆಪ್ಟೆಂಬರ್ 1, ಬುಧವಾರ) ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ (Diesel Price) ಇಳಿಕೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಇಂಧನ ದರದಲ್ಲಿ (Fuel Price) 15 ಪೈಸೆ ಇಳಿಕೆ ಮಾಡಿವೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 88.77 ರೂಪಾಯಿಗೆ ಇಳಿಕೆ ಆಗಿದೆ. ಇಂಧನ ದರದಲ್ಲಿ 15 ಪೈಸೆ ಇಳಿಕೆ ಮಾಡಲಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.39 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.33 ರೂಪಾಯಿ ಆಗಿದೆ.

ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.65 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 89.34 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.27 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.91 ರೂಪಾಯಿಗೆ ಇಳಿಕೆಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೊಲ್ ದರ 109.77 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.57 ರೂಪಾಯಿಗೆ ಇಳಿದಿದೆ.

19 ರಾಜ್ಯಗಳಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ 100ರ ಗಡಿ ಆಚೆಗಿದೆ ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ನಗರದಲ್ಲಿಯೂ ಸಹ ಲೀಟರ್ ಪೆಟ್ರೋಲ್ ದರ 100ರ ಆಚೆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel prices fall down 15 paise today 2021 september 1 check fuel rate in bangalore mumbai delhi and major city)

Published On - 7:40 am, Wed, 1 September 21

Follow Us
TV9 Web
TV9 Web

TV9 Kannada

Read More
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ