AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ; ನಿಮ್ಮೂರಿನಲ್ಲಿ ಇಂಧನ ಬೆಲೆ ಎಷ್ಟಿದೆ ಪರಿಶೀಲಿಸಿ

Petrol Rate Today: ಸರ್ಕಾರ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೊಲ್ ಬೆಲೆಯಲ್ಲಿ 10 ರಿಂದ 15 ಪೈಸೆ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 15 ಪೈಸೆ ಇಳಿಕೆ ಮಾಡಿವೆ.

Petrol Price Today: ಇಂದು ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್​ ದರ; ನಿಮ್ಮೂರಿನಲ್ಲಿ ಇಂಧನ ಬೆಲೆ ಎಷ್ಟಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 05, 2021 | 8:24 AM

Share

Petrol Diesel Price Today | ದೆಹಲಿ: ಕಳೆದ ಕೆಲವು ದಿನಗಳಿಂದ ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಹಲವು ದಿನಗಳ ಬಳಿಕ ಇಂದು ( ಸೆಪ್ಟೆಂಬರ್ 5, ರವಿವಾರ) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಸರ್ಕಾರ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೊಲ್ ಬೆಲೆಯಲ್ಲಿ (Petrol Price) 10 ರಿಂದ 15 ಪೈಸೆ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ (Diesel Price) 15 ಪೈಸೆ ಇಳಿಕೆ ಮಾಡಿವೆ. ಆ ಮೂಲಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 88.62 ರೂಪಾಯಿ ನಿಗದಿ ಆಗಿದೆ.

ಕಳೆದ ಬುಧವಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿತ್ತು. ಕಳೆದ ಆಗಸ್ಟ್ ತಿಂಗಳಿನಲ್ಲಿ ಎರಡು ಬಾರಿ ಇಂಧನ ದರ ಇಳಿಕೆ ಆಗಿತ್ತು. ಆ ಬಳಿಕ ಯಾವುದೇ ಬದಲಾವಣೆಗಳಿರಲಿಲ್ಲ. ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ತಿಳಿಯೋಣ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 96.19 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.96 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.26 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.84 ರೂಪಾಯಿಗೆ ಇಳಿದಿದೆ.

ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.52 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 89.21 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.17 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.76 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿಗೆ ಇಳಿಕೆ ಆಗಿದೆ.

ದೇಶಾದ್ಯಂತ ಸುಮಾರು 19 ರಾಜ್ಯಗಳಲ್ಲಿ ಲೀಟ್ ಪೆಟ್ರೋಲ್ ದರ 100ರ ಆಚೆಗಿದೆ ದೇಶಾದ್ಯಂತ ಸುಮಾರು 19 ರಾಜ್ಯಗಳಲ್ಲಿ ಲೀಟರ್ ಪೆಟ್ರೊಲ್ ಬೆಲೆ 100ರ ಗಡಿ ದಾಟಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಗೆ ಸೇರಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನಲ್ಲಿಯೂ ಸಹ ಲೀಟರ್ ಪೆಟ್ರೊಲ್ ಬೆಲೆ 100ರ ಗಡಿ ಆಚೆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel prices fall down today 2021 september 5 check fuel rate in bangalore mumbai delhi and major city)

Published On - 8:11 am, Sun, 5 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್