Petrol, Diesel Price Cut: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ: ವರದಿ

ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ, ಗುಜರಾತ್​ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ ದರ ಕಡಿತದ ಮಹತ್ವದ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.

Petrol, Diesel Price Cut: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ: ವರದಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Nov 02, 2022 | 10:25 AM

ನವದೆಹಲಿ: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು (OMCs) ಪೆಟ್ರೋಲ್ (Petrol Price), ಡೀಸೆಲ್ ದರದಲ್ಲಿ (Diesel Rate) 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿರುವುದು ಮತ್ತು ಚಿಲ್ಲರೆ ಮಾರಾಟಗಾರರ ಪ್ರಾಡಕ್ಟ್ ಮಾರ್ಜಿನ್ ಉತ್ತಮಗೊಂಡಿರುವುದೇ ಬೆಲೆ ಇಳಿಕೆ ಮಾಡುವ ಕುರಿತು ಚಿಂತನೆಗೆ ಕಾರಣ ಎನ್ನಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ತೈಲ ದರದಲ್ಲಿ ಪ್ರತಿ ದಿನ 40 ಪೈಸೆಯಂತೆ ಇಳಿಕೆಯಾಗಲಿದೆ ಎಂದು ಸಿಎನ್​ಬಿಸಿ ಆವಾಜ್ ವರದಿ ಮಂಗಳವಾರ ತಿಳಿಸಿತ್ತು. ಇದರ ಪರಿಣಾಮವಾಗಿ ಒಟ್ಟಾರೆಯಾಗಿ ಕೆಲವು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ವರೆಗೆ ಇಳಿಕೆಯಾಗಬಹುದು ಎಂದು ವರದಿ ಅಂದಾಜಿಸಿದೆ.

ಹಿಮಾಚಲ ಪ್ರದೇಶ, ಗುಜರಾತ್​ ವಿಧಾನಸಭೆ ಚುನಾವಣೆಗಳು ರಾಜಕೀಯವಾಗಿಯೂ ತೈಲ ಕಂಪನಿಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ. ಚುನಾವಣೆ ದಿನಾಂಕ ಸಮೀಪಿಸುತ್ತಿರುವಂತೆಯೇ ದರ ಕಡಿತದ ಮಹತ್ವದ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಇಂಧನ ದರದಲ್ಲಿ ತುಸು ಇಳಿಕೆ ಮಾಡುವುದರಿಂದ ಹಣದುಬ್ಬರದಲ್ಲಿ ತುಸು ಇಳಿಕೆ ಮಾಡುವುದು ಸಾಧ್ಯವಾಗಲಿದೆ. ಇದರಿಂದ ಪ್ರತಿಪಕ್ಷಗಳ ಟೀಕೆ ಎದುರಿಸುವುದು ಸರ್ಕಾರಕ್ಕೆ ಸಾಧ್ಯವಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Petrol Price on November 2: ಕಚ್ಚಾ ತೈಲದ ಬೆಲೆ ಏರಿಕೆ; ಇಂದಿನ ಪೆಟ್ರೋಲ್- ಡೀಸೆಲ್ ದರವೆಷ್ಟು?

ಇದನ್ನೂ ಓದಿ
Image
ಟ್ವಿಟರ್​ಗೆ ಮರಳಲಿದ್ದಾರೆ ಶ್ರೀರಾಮ್ ಕೃಷ್ಣನ್; ಯಾರಿವರು, ಎಲಾನ್ ಮಸ್ಕ್​ಗೆ ಹೇಗೆ ನೆರವಾಗಲಿದ್ದಾರೆ?
Image
World Savings Day 2022: ವಿಶ್ವ ಉಳಿತಾಯ ದಿನ; ಮಹತ್ವ, ಇತಿಹಾಸ, ಧ್ಯೇಯದ ಬಗ್ಗೆ ಇಲ್ಲಿದೆ ವಿವರ
Image
ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
Image
FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ

ತೈಲ ಬೆಲೆಗಳಲ್ಲಿ ಮಂಗಳವಾರದಿಂದ ಇಳಿಕೆ ಟ್ರೆಂಡ್ ಕಂಡುಬರುತ್ತಿದ್ದು, ಪ್ರತಿ ಟನ್ ಕಚ್ಚಾ ತೈಲದ ಮೇಲಿನ ವೈಂಡ್​ಫಾಲ್ ಗಳಿಕೆ ತೆರಿಗೆಯನ್ನು ಸರ್ಕಾರವು 11,000 ರೂ.ಗಳಿಂದ 9,500 ರೂ.ಗೆ ಇಳಿಕೆ ಮಾಡಿದೆ. ಜತೆಗೆ, ಜೆಟ್ ಇಂಧನದ ರಫ್ತಿನ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್​ಗೆ 3.5ರ ರೂ.ನಿಂದ 5 ರೂ.ಗೆ ಹೆಚ್ಚಿಸಲಾಗಿದೆ. ಡೀಸೆಲ್ ರಫ್ತಿನ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್​ಗೆ 12 ರೂ.ನಿಂದ 13 ರೂ.ಗೆ ಹೆಚ್ಚಿಸಲಾಗಿದೆ.

ದೇಶೀಯ ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ಗಳಿಸುವ ಹೆಚ್ಚುವರಿ ಲಾಭದ ಮೇಲೆ ವಿಧಿಸುವ ತೆರಿಗೆಯಾಗಿದೆ ವೈಂಡ್​ಫಾಲ್ ಗಳಿಕೆ ತೆರಿಗೆ. ಹೀಗಾಗಿ ಈ ತೆರಿಗೆ ಕಡಿತವುಇಂಧನ ದರದ ಇಳಿಕೆಗೆ ನೆರವಾಗಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದಾಖಲೆ ಮಟ್ಟಕ್ಕೆ ಕುಸಿದಿತ್ತು. ಆದರೆ ಆಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲಾಗಿದೆ. ಈ ಮಧ್ಯೆ, ನವೆಂಬರ್ 1ರಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 40 ಪೈಸೆ ಇಳಿಕೆಯಾಗಲಿದೆ ಎಂದು ಹೇಳಲಾಗಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ