Petrol Diesel Price on September 10: ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 10, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಾಣುತ್ತಿದೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 71.73 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್‌ಗೆ 68.36ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on September 10: ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ಪೆಟ್ರೋಲ್
Image Credit source: Hindustan Times

Updated on: Sep 10, 2024 | 7:11 AM

ದಿನದಿಂದ ದಿನಕ್ಕೆ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಾಣುತ್ತಿದೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 71.73 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್‌ಗೆ 68.36ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಆಂಧ್ರಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 0.7 ಪೈಸೆಯಷ್ಟು ಏರಿಕೆಯಾಗಿದ್ದು, ಛತ್ತೀಸ್‌ಗಢದಲ್ಲಿ ಪೆಟ್ರೋಲ್ ಬೆಲೆ 0.60 ಪೈಸೆಯಷ್ಟು ಕಡಿಮೆಯಾಗಿದೆ. ಇದಲ್ಲದೆ ಹರಿಯಾಣ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರ ಮತ್ತು ಜಾರ್ಖಂಡ್‌ನಲ್ಲಿಯೂ ಪೆಟ್ರೋಲ್ ದುಬಾರಿಯಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.76 ರೂ. ಇದೆ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.84 ರೂ.,ಡೀಸೆಲ್ ದರ 88.95 ರೂ. ಇದೆ.

ಮತ್ತಷ್ಟು ಓದಿ: Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.35 ರೂ. ಇದೆ.

ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.14 ರೂ. ಇಂದು ನಳಂದದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.61 ರೂ. ಇಂದು ಗಯಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.55 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.24 ರೂ. ಇಂದು ಬಿಲಾಸ್ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.48 ರೂ. ಇಂದು ರಾಜ್‌ಕೋಟ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.19 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ನವೀಕರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us