AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 11: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 11, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ.

Petrol Diesel Price on December 11: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್ Image Credit source: Autocar Professional
ನಯನಾ ರಾಜೀವ್
|

Updated on: Dec 11, 2024 | 7:14 AM

Share

ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ. ಇದಲ್ಲದೇ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 39 ಪೈಸೆ ಇಳಿಕೆಯಾಗಿದ್ದು ಲೀಟರ್‌ಗೆ 104.43 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 37 ಪೈಸೆ ಇಳಿಕೆಯಾಗಿ 90.95 ರೂ.ಗೆ ತಲುಪಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 72.12 ಡಾಲರ್​ ಆಗಿದ್ದು,ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.34 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

ಮತ್ತಷ್ಟು ಓದಿ: ಕಚ್ಚಾತೈಲ ಬೆಲೆ ಕೊಂಚ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.96 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತವು ತನ್ನ ಕಚ್ಚಾ ತೈಲದ ಗಮನಾರ್ಹ ಭಾಗವನ್ನು ಆಮದು ಮಾಡಿಕೊಳ್ಳುತ್ತದೆ, ಆದ್ದರಿಂದ ಭಾರತೀಯ ರೂಪಾಯಿ ಮತ್ತು ಯುಎಸ್ ಡಾಲರ್ ನಡುವಿನ ವಿನಿಮಯ ದರದಲ್ಲಿನ ಬದಲಾವಣೆಗಳು ಇಂಧನ ಬೆಲೆಗಳ ಮೇಲೆ ಪ್ರಭಾವ ಬೀರುತ್ತವೆ. ದುರ್ಬಲವಾದ ರೂಪಾಯಿಯು ಸಾಮಾನ್ಯವಾಗಿ ಹೆಚ್ಚಿನ ಇಂಧನ ವೆಚ್ಚಗಳಿಗೆ ಕಾರಣವಾಗುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​