Petrol Diesel Price on December 11: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 11, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ.

Petrol Diesel Price on December 11: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್
Image Credit source: Autocar Professional

Updated on: Dec 11, 2024 | 7:14 AM

ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ.
ಇದಲ್ಲದೇ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 39 ಪೈಸೆ ಇಳಿಕೆಯಾಗಿದ್ದು ಲೀಟರ್‌ಗೆ 104.43 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 37 ಪೈಸೆ ಇಳಿಕೆಯಾಗಿ 90.95 ರೂ.ಗೆ ತಲುಪಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 72.12 ಡಾಲರ್​ ಆಗಿದ್ದು,ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.34 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

ಮತ್ತಷ್ಟು ಓದಿ: ಕಚ್ಚಾತೈಲ ಬೆಲೆ ಕೊಂಚ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.96 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತವು ತನ್ನ ಕಚ್ಚಾ ತೈಲದ ಗಮನಾರ್ಹ ಭಾಗವನ್ನು ಆಮದು ಮಾಡಿಕೊಳ್ಳುತ್ತದೆ, ಆದ್ದರಿಂದ ಭಾರತೀಯ ರೂಪಾಯಿ ಮತ್ತು ಯುಎಸ್ ಡಾಲರ್ ನಡುವಿನ ವಿನಿಮಯ ದರದಲ್ಲಿನ ಬದಲಾವಣೆಗಳು ಇಂಧನ ಬೆಲೆಗಳ ಮೇಲೆ ಪ್ರಭಾವ ಬೀರುತ್ತವೆ. ದುರ್ಬಲವಾದ ರೂಪಾಯಿಯು ಸಾಮಾನ್ಯವಾಗಿ ಹೆಚ್ಚಿನ ಇಂಧನ ವೆಚ್ಚಗಳಿಗೆ ಕಾರಣವಾಗುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us