Petrol Diesel Price on November 12: ಲಕ್ನೋ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 12, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 73.63 ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.09 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on November 12: ಲಕ್ನೋ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್
Image Credit source: HT Auto

Updated on: Nov 12, 2024 | 7:06 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 73.63 ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.09 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.
ಇಂದು ವಿಜಯವಾಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.41 ರೂ. ಇದೆ.

ಇಂದು ಇಟಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.97 ರೂ. ಇಂದು ದಿಬ್ರುಗಢದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.39 ರೂ. ಇಂದು ಜೆಹಾನಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.24 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.78 ರೂ.

ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.56 ರೂ. ಇಂದು ಭರೂಚ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94.72 ರೂ. ಇಂದು ಕುರುಕ್ಷೇತ್ರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.15 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.35 ರೂ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.92 ರೂ. ಇಂದು ಕೊಟ್ಟಾಯಂನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.72 ರೂ. ಇದೆ.

ಮತ್ತಷ್ಟು ಓದಿ: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಉತ್ತರ ಪ್ರದೇಶದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಿದೆ. ಗಾಜಿಯಾಬಾದ್ ನಲ್ಲಿ ಪೆಟ್ರೋಲ್ ಬೆಲೆ 12 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆ 14 ಪೈಸೆ ಇಳಿಕೆಯಾಗಿದೆ. ಲಕ್ನೋದಲ್ಲಿಯೂ ಪೆಟ್ರೋಲ್ ಬೆಲೆಯಲ್ಲಿ 12 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 14 ಪೈಸೆ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಯುಪಿ ಹೊರತುಪಡಿಸಿ, ಬಿಹಾರದ ರಾಜಧಾನಿ ಪಾಟ್ನಾದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗಿದೆ. ಇಲ್ಲಿ ಪೆಟ್ರೋಲ್ ಬೆಲೆಯಲ್ಲಿ 8 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 7 ಪೈಸೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 102.92 ರೂ. ಆದರೆ ಡೀಸೆಲ್ ದರ ಲೀಟರ್‌ಗೆ 88.99 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us