Petrol Diesel Price on March 19: ಮುಂಬೈ, ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಕಂಪನಿಗಳು ಮಾರ್ಚ್​ 19ರಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 85.29 ಡಾಲರ್​ನಷ್ಟು ದರದೊಂದಿಗೆ ವಹಿವಾಟು ನಡೆಸುತ್ತಿದೆ. ಮಾರ್ಚ್ 15 ರಿಂದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡಿದೆ.

Petrol Diesel Price on March 19: ಮುಂಬೈ, ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಇಳಿಕೆ
ಪೆಟ್ರೋಲ್
Image Credit source: Digit Insurance

Updated on: Mar 19, 2024 | 7:07 AM

ಸರ್ಕಾರಿ ತೈಲ ಕಂಪನಿಗಳು ಮಾರ್ಚ್​ 19ರ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ WTI ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 81.03 ಡಾಲರ್​ಗೆ 0.01% ಇಳಿಕೆಯೊಂದಿಗೆ ಮಾರಾಟ ಮಾಡಲಾಗುತ್ತಿದೆ.

ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 85.29 ಡಾಲರ್​ನಷ್ಟು ದರದೊಂದಿಗೆ ವಹಿವಾಟು ನಡೆಸುತ್ತಿದೆ. ಮಾರ್ಚ್ 15 ರಿಂದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಅದೇ ಸಮಯದಲ್ಲಿ, ಲಕ್ಷದ್ವೀಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ 15 ರೂಪಾಯಿಗಳಷ್ಟು ಅಗ್ಗವಾಗಿದೆ. ಭಾರತದಲ್ಲಿ, ಇತ್ತೀಚಿನ ಇಂಧನ ದರಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ.

ಮತ್ತಷ್ಟು ಓದಿ: Petrol Diesel Price on March 18: ಈ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ಅಗ್ಗ

ಎಲ್ಲೆಲ್ಲಿ ಎಷ್ಟೆಷ್ಟು ದರ
– ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಇದೆ.
-ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 104.21 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.
-ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ.
-ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ
– ನೋಯ್ಡಾ: ಲೀಟರ್‌ಗೆ ಪೆಟ್ರೋಲ್ 94.83 ರೂ. ಮತ್ತು ಡೀಸೆಲ್ ಲೀಟರ್‌ಗೆ 87.96 ರೂ.
-ಗುರುಗ್ರಾಮ: ಲೀಟರ್‌ಗೆ ಪೆಟ್ರೋಲ್ 95.19 ರೂ. ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.
-ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 99.84 ಮತ್ತು ಡೀಸೆಲ್ ಲೀಟರ್‌ಗೆ 85.93 ರೂ.
-ಚಂಡೀಗಢ: ಪೆಟ್ರೋಲ್ ಲೀಟರ್‌ಗೆ 94.24 ಮತ್ತು ಡೀಸೆಲ್ ಲೀಟರ್‌ಗೆ 82.40 ರೂ.
-ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
-ಜೈಪುರ: ಪೆಟ್ರೋಲ್ ಪ್ರತಿ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.
-ಪಾಟ್ನಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.
-ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತದೆ
ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ತಿಳಿಯುವುದು ಹೇಗೆ?
ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು.
ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಇತ್ತೀಚಿನ ದರವನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us