Petrol Diesel Price on January 06: ತೆಲಂಗಾಣ, ಉತ್ತರಾಖಂಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 06, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.72 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on January 06: ತೆಲಂಗಾಣ, ಉತ್ತರಾಖಂಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್
Image Credit source: The Financial Express

Updated on: Jan 06, 2025 | 7:09 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಆದರೆ ದೇಶದಲ್ಲಿ ಇಂಧನ ದರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಗೋವಾ, ಹರಿಯಾಣ, ಹಿಮಾಚಲ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ಪಂಜಾಬ್, ತಮಿಳುನಾಡು, ತ್ರಿಪುರಾ ಮತ್ತು ಯುಪಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ.

ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.72 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ., ಲಕ್ನೋದಲ್ಲಿ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ., ನೋಯ್ಡಾದಲ್ಲಿ ಪೆಟ್ರೋಲ್ 94.87 ರೂ., ಡೀಸೆಲ್ 87.76 ರೂ., ಗುರುಗ್ರಾಮದಲ್ಲಿ ಪೆಟ್ರೋಲ್ 94.98 ರೂ., ಡೀಸೆಲ್ 87.85 ರೂ., ಚಂಡೀಗಢದಲ್ಲಿ ಪೆಟ್ರೋಲ್ 94.24 ರೂ., ಡೀಸೆಲ್ 82.40 ರೂ. ಪಾಟ್ನಾದಲ್ಲಿ ಪೆಟ್ರೋಲ್ 105.42 ರೂ., ಡೀಸೆಲ್ 92.27 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us