Petrol Diesel Price on October 21: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 21, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.06 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.22 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on October 21: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್
Image Credit source: ACKO Drive

Updated on: Oct 21, 2024 | 7:58 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.06 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.22 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಏರಿಕೆ

ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದಲ್ಲಿ ಪೆಟ್ರೋಲ್ ಬೆಲೆ 22 ಪೈಸೆ ಏರಿಕೆಯಾಗಿದ್ದು, ಡೀಸೆಲ್ ದರ 20 ಪೈಸೆ ಏರಿಕೆಯಾಗಿದೆ. ಬಿಹಾರದಲ್ಲಿ ಪೆಟ್ರೋಲ್ ಬೆಲೆ 107.09 ಮತ್ತು ಡೀಸೆಲ್ ಬೆಲೆ 93.81 ರೂ. ಇನ್ನು ರಾಜಧಾನಿ ಪಾಟ್ನಾ ಬಗ್ಗೆ ಮಾತನಾಡುವುದಾದರೆ ಇಂದು ಇಲ್ಲಿ ಪೆಟ್ರೋಲ್ ಬೆಲೆ 106.06 ರೂ., ಡೀಸೆಲ್ ಬೆಲೆ 92.87 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us