AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on October 22: ಅಸ್ಸಾಂ, ಮಧ್ಯಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 22, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕ್ರೂಡ್ ಪ್ರತಿ ಬ್ಯಾರೆಲ್‌ಗೆ 73.30 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.47 ಡಾಲರ್​ಗೆ ವಹಿವಾಟು ನಡೆಸುತ್ತಿದೆ.

Petrol Diesel Price on October 22: ಅಸ್ಸಾಂ, ಮಧ್ಯಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ Image Credit source: Indian Express
ನಯನಾ ರಾಜೀವ್
|

Updated on:Oct 22, 2024 | 7:20 AM

Share

ಅಸ್ಸಾಂ, ಮಧ್ಯಪ್ರದೇಶ, ಹರ್ಯಾಣ ಸೇರಿದಂತೆ ಹಲವೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕ್ರೂಡ್ ಪ್ರತಿ ಬ್ಯಾರೆಲ್‌ಗೆ 73.30 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 69.47 ಡಾಲರ್​ಗೆ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ. ರಾಜ್ಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಕುರಿತು ಮಾತನಾಡುತ್ತಾ, ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 44 ಪೈಸೆ ಏರಿಕೆಯಾಗಿ 107.31 ರೂ.ಗೆ ಮತ್ತು ಡೀಸೆಲ್ 41 ಪೈಸೆ ಏರಿಕೆಯಾಗಿ 94.02 ರೂ. ಇದೆ.

ಮತ್ತಷ್ಟು ಓದಿ: Petrol Diesel Price on October 21: ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಮಹಾರಾಷ್ಟ್ರದಲ್ಲಿ, ಪೆಟ್ರೋಲ್ ಬೆಲೆ ಲೀಟರ್‌ಗೆ 25 ಪೈಸೆ ಏರಿಕೆಯಾಗಿ 107.77 ರೂಪಾಯಿಗಳಿಗೆ ಮತ್ತು ಡೀಸೆಲ್ ಲೀಟರ್‌ಗೆ 54 ಪೈಸೆ ಏರಿಕೆಯಾಗಿ 90.96 ರೂಪಾಯಿಗಳಿಗೆ ತಲುಪಿದೆ. ಇದಲ್ಲದೆ, ಅಸ್ಸಾಂ, ಛತ್ತೀಸ್‌ಗಢ, ಗೋವಾ, ಹರಿಯಾಣ, ಹಿಮಾಚಲ, ಜಮ್ಮು, ಕೇರಳ, ಮಧ್ಯಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.

ಅದೇ ಸಮಯದಲ್ಲಿ, ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಕರ್ನಾಟಕ ಮತ್ತು ಮಣಿಪುರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ.ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ, ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:19 am, Tue, 22 October 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ