AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on February 14: ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ಬಿಹಾರದಲ್ಲಿ ಏರಿಕೆ

ಸರ್ಕಾರಿ ತೈಲ ಕಂಪನಿಗಳು ಫೆಬ್ರವರಿ 14ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗಿದ್ದರೆ ಬಿಹಾರದಲ್ಲಿ ತುಸು ಹೆಚ್ಚಾಗಿದೆ. ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಆಗಿದೆ.

Petrol Diesel Price on February 14: ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ಬಿಹಾರದಲ್ಲಿ ಏರಿಕೆ
ಪೆಟ್ರೋಲ್Image Credit source: Busi
ನಯನಾ ರಾಜೀವ್
|

Updated on: Feb 14, 2024 | 7:09 AM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ 82 ಡಾಲರ್ ದಾಟಿದೆ. ಇದರ ಪರಿಣಾಮ ಪ್ರೇಮಿಗಳ ದಿನಕ್ಕೂ ಮುನ್ನ ಪೆಟ್ರೋಲ್, ಡೀಸೆಲ್ ಬೆಲೆ ಮೇಲೂ ಗೋಚರವಾಗಿತ್ತು. ಮಂಗಳವಾರ ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿರುವ ತೈಲ ಬೆಲೆಯಲ್ಲಿ ಬದಲಾವಣೆಯಾಗಿದೆ. ಇಂದು, ಅನೇಕ ನಗರಗಳಲ್ಲಿ ತೈಲ ಬೆಲೆ ಕಡಿಮೆಯಾಗಿದೆ ಮತ್ತು ಅನೇಕ ಸ್ಥಳಗಳಲ್ಲಿ ಹೆಚ್ಚಾಗಿದೆ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಇಂದು ಗೌತಮ್ ಬುದ್ಧ ನಗರದಲ್ಲಿ (ನೋಯ್ಡಾ-ಗ್ರೇಟರ್ ನೋಯ್ಡಾ) ಪೆಟ್ರೋಲ್ 41 ಪೈಸೆಗಳಷ್ಟು ಅಗ್ಗವಾಗಿದೆ ಮತ್ತು ಲೀಟರ್‌ಗೆ 96.59 ರೂ.ಗೆ ಮಾರಾಟವಾಗುತ್ತಿದೆ. ಇಲ್ಲಿ ಡೀಸೆಲ್ ಕೂಡ 38 ಪೈಸೆ ಇಳಿಕೆಯಾಗಿದ್ದು, ಲೀಟರ್‌ಗೆ 89.76 ರೂ.ಗೆ ತಲುಪಿದೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಪೆಟ್ರೋಲ್ ಲೀಟರ್‌ಗೆ 30

ಪೈಸೆ ಏರಿಕೆಯಾಗಿ 107.54 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 28 ​​ಪೈಸೆ ಹೆಚ್ಚಳದೊಂದಿಗೆ 94.32 ರೂ.ಗೆ ಮಾರಾಟವಾಗುತ್ತಿದೆ. ಹರಿಯಾಣದ ರಾಜಧಾನಿ ಗುರುಗ್ರಾಮ್‌ನಲ್ಲಿ ಪೆಟ್ರೋಲ್ ಬೆಲೆಯೂ ಹೆಚ್ಚಾಗಿದೆ ಮತ್ತು ಲೀಟರ್‌ಗೆ 20 ಪೈಸೆ ಏರಿಕೆಯಾಗಿ 96.97 ರೂ.ಗೆ ತಲುಪಿದೆ, ಆದರೆ ಡೀಸೆಲ್ 19 ಪೈಸೆಯಷ್ಟು ಹೆಚ್ಚಾಗಿದೆ ಮತ್ತು ಲೀಟರ್‌ಗೆ 89.84 ರೂ.ಗೆ ಮಾರಾಟವಾಗುತ್ತಿದೆ.

ಕಚ್ಚಾ ತೈಲದ ಬೆಲೆ ಇಲ್ಲಿ ಏರಿಕೆಯಾಗಿದೆ, ಕಚ್ಚಾ ತೈಲವು ಜಾಗತಿಕ ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವೂ ದುಬಾರಿಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 82.00 ಡಾಲರ್​ಗೆ ಏರಿದೆ. WTI ದರವು ಇಂದು ಪ್ರತಿ ಬ್ಯಾರೆಲ್‌ಗೆ 76.92 ಡಾಲರ್​ಗೆ ಏರಿದೆ.

ಮತ್ತಷ್ಟು ಓದಿ: Petrol Diesel Price on February 13: ಕಚ್ಚಾತೈಲ ಬೆಲೆಯಲ್ಲಿ ಇಳಿಕೆ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಅಗ್ಗ

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ 89.62 ರೂ. – ಮುಂಬೈ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈ ನಗರಗಳಲ್ಲಿಯೂ ಬೆಲೆಗಳು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.59 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ. -ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.54 ರೂ ಮತ್ತು ಡೀಸೆಲ್ 94.32 ರೂ ಆಗಿದೆ. – ಗುರುಗ್ರಾಮದಲ್ಲಿ ಪೆಟ್ರೋಲ್ 96.97 ರೂ ಮತ್ತು ಡೀಸೆಲ್ ಲೀಟರ್‌ಗೆ 89.84 ರೂ ಆಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದುಪ್ಪಟ್ಟು ಆಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ