AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on June 21: ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 21, ಶುಕ್ರವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಎಲ್ಲಾ ಕಡೆ ಇಂಧನ ಬೆಲೆ ಸ್ಥಿರವಾಗಿವೆ.

Petrol Diesel Price on June 21: ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪೆಟ್ರೋಲ್Image Credit source: Digit Insurance
ನಯನಾ ರಾಜೀವ್
|

Updated on: Jun 21, 2024 | 7:21 AM

Share

ದೇಶದಲ್ಲಿ ಇಂಧನ ಬೆಲೆಗಳು ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ. ಸರ್ಕಾರಿ ತೈಲ ಕಂಪನಿಗಳು ಜೂನ್ 21ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕರ್ನಾಟಕದಲ್ಲಿ ಒಂದು ವಾರದ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 3 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು.

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ದೇಶದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ಮಾರ್ಚ್ 2024 ರಿಂದ ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆಯನ್ನು ರೂ 2 ರಷ್ಟು ಕಡಿತಗೊಳಿಸಿದಾಗಿನಿಂದ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಗಳು ಬದಲಾಗದೆ ಉಳಿದಿವೆ.

ಕೇಂದ್ರ ಸರ್ಕಾರ ಮತ್ತು ಹಲವಾರು ರಾಜ್ಯಗಳು ಇಂಧನ ತೆರಿಗೆಗಳನ್ನು ಕಡಿತಗೊಳಿಸಿದ ನಂತರ ಮೇ 2022 ರಿಂದ ಇಂಧನ ಬೆಲೆಗಳು ಸ್ಥಿರವಾಗಿವೆ. ಕರ್ನಾಟಕದಲ್ಲಿ ಮಾತ್ರ ಹೆಚ್ಚಿಸಲಾಗಿದೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾದಂತಹ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ಮತ್ತಷ್ಟು ಓದಿ: Petrol Diesel Price on June 20: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಪುಣೆಯಲ್ಲಿ ಇಂದು ಪೆಟ್ರೋಲ್ ಬೆಲೆ 103.88 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.41 ರೂ. ಇದೆ. ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 94.65 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.76 ರೂ. ಗುರುಗ್ರಾಮ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.87 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.73 ರೂ. ಹೈದರಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 107.41 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 95.65 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.62 ರೂ. ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 102.84 ಮತ್ತು ಡೀಸೆಲ್ 88.92 ರೂ.

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸಹ ನೀವು ಪರಿಶೀಲಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಿ ಅಥವಾ SMS ಕಳುಹಿಸಿ. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು ನಗರ ಕೋಡ್ ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಅನ್ನು ನಮೂದಿಸುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ