AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಯಿಲ್ಲ; ಸತತ 6 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಕಳೆದ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆರಡನ್ನೂ ಇಳಿಕೆ ಮಾಡಲಾಯಿತು. ಆ ನಂತರ ಇನ್ನೇನು ಇಂಧನ ದರ ಇಳಿಕೆಯತ್ತ ಸಾಗುತ್ತದೆ ಎಂಬ ನಿರೀಕ್ಷೆಯಲ್ಲಿ ಗ್ರಾಹಕರಿದ್ದರು.

Petrol Price Today: ಇಂದು ಸಹ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಯಿಲ್ಲ; ಸತತ 6 ದಿನಗಳಿಂದ ಇಂಧನ ದರ ಸ್ಥಿರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 30, 2021 | 7:21 AM

Share

Petrol Diesel Price Today | ದೆಹಲಿ: ಸತತ 6 ದಿನಗಳಿಂದ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಯಾವುದೇ ಏರಿಳಿತ ಕಂಡು ಬಂದಿಲ್ಲ. ಕಳೆದ ಮಂಗಳವಾರ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಗಳೆರಡನ್ನೂ (Diesel Price) ಇಳಿಕೆ ಮಾಡಲಾಯಿತು. ಆ ನಂತರ ಇನ್ನೇನು ಇಂಧನ ದರ (Fuel Price) ಇಳಿಕೆಯತ್ತ ಸಾಗುತ್ತದೆ ಎಂಬ ನಿರೀಕ್ಷೆಯಲ್ಲಿ ಗ್ರಾಹಕರಿದ್ದರು. ಆದರೆ ಇಂದು ( ಆಗಸ್ಟ್ 30, ಸೋಮವಾರ) ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.92 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.48 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.82 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.98 ರೂಪಾಯಿ ಇದೆ. ಅದೇ ರೀತಿ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 109.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.72 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೊಲ್ ದರ 105.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.99 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.34 ರೂಪಾಯಿ ಇದೆ. ಅದೇ ರೀತಿ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98/56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.29 ರೂಪಾಯಿ ಇದೆ.

ಕಳೆದ ಮಂಗಳವಾರ ಪೆಟ್ರೊಲ್, ಡೀಸೆಲ್ ದರವನ್ನು ತಲಾ 15 ಪೈಸೆಸೆಯಂತೆ ಕಡಿತಗೊಳಿಸಲಾಯಿತು. ಅದಕ್ಕೂ ಮುಂಚೆ ಭಾನುವಾರ ಇಂಧನ ದರದಲ್ಲಿ ಇಳಿಕೆ ಮಾಡಲಾಗಿತ್ತು. ಅದಾದ ನಂತರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel prices unchanged today 2021 august 30 check fuel rate in bangalore mumbai delhi and major city)

Published On - 7:12 am, Mon, 30 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?