Petrol Price Today: ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ರೇಟ್ ಎಷ್ಟಿದೆ ಗೊತ್ತಾ?

| Updated By: shruti hegde

Updated on: Sep 02, 2021 | 7:38 AM

Petrol Rate Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ತೈಲ ದರ ಸ್ಥಿರವಾಗಿಯೇ ಉಳಿದಿದೆ. ವಿವಿಧ ನಗರಗಳಲ್ಲಿ ಯಾವ ಬೆಲೆಗೆ ಪೆಟ್ರೋಲ್, ಡೀಸೆಲ್ ಮಾರಾಟವಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Petrol Price Today: ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ರೇಟ್ ಎಷ್ಟಿದೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us on

Petrol Diesel Price Today | ದೆಹಲಿ: ನಿನ್ನೆ ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಇಳಿಕೆ ಮಾಡಲಾಯಿತು. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 15 ಪೈಸೆ ಇಳಿಕೆ ಕಂಡಿತು. ಆದರೆ ಇಂದು ( ಸೆಪ್ಟೆಂಬರ್ 2, ಗುರುವಾರ) ಇಂಧನ ದರದಲ್ಲಿ (Fuel Price) ಯಾವುದೇ ಏರಿಳಿತಗಳಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ತೈಲ ದರ ಸ್ಥಿರವಾಗಿಯೇ ಉಳಿದಿದೆ. ವಿವಿಧ ನಗರಗಳಲ್ಲಿ ಯಾವ ಬೆಲೆಗೆ ಪೆಟ್ರೋಲ್ (Petrol Price), ಡೀಸೆಲ್ (Diesel Price) ಮಾರಾಟವಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

19 ರಾಜ್ಯಗಳಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ 100ರ ಗಡಿ ಆಚೆಗಿದೆ
ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ನಗರದಲ್ಲಿಯೂ ಸಹ ಲೀಟರ್ ಪೆಟ್ರೋಲ್ ದರ 100ರ ಆಚೆಗಿದೆ.

ವಿವಿಧ ನಗರಗಳಲ್ಲಿನ ಪೆಟ್ರೋಲ್​, ಡೀಸೆಲ್​ ಬೆಲೆ
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 88.77 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.39 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 96.33 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.38 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.84 ರೂಪಾಯಿ ಇದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ 109.77 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.57 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ಗೆ 104.84 ರೂಪಾಯಿ ಹಾಗು ಲೀಟರ್ ಡೀಸೆಲ್​ಗೆ 94.19 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 89.15 ರೂಪಾಯಿ ಇದೆ. ಅದೇ ರೀತಿ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.53 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol diesel prices unchanged today 2021 september 2 check fuel rate in bangalore mumbai delhi and major city)

Published On - 7:13 am, Thu, 2 September 21