AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ನಾಲ್ಕು ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

Petrol Rate Today: ಸತತ ನಾಲ್ಕನೇ ದಿನವೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಕಳೆದ ಮಂಗಳವಾರ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್​ಗೆ 15 ಪೈಸೆಯಂತೆ ಇಳಿಕೆ ಮಾಡಲಾಗಿತ್ತು. ಇದೇ ಸಮಯದಲ್ಲಿ ಡೀಸೆಲ್ ಬೆಲೆ ಕೂಡಾ 15 ಪೈಸೆ ಇಳಿಕೆ ಕಂಡಿತ್ತು.

Petrol Price Today: ಸತತ ನಾಲ್ಕು ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 28, 2021 | 7:33 AM

Share

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು (ಆಗಸ್ಟ್ 28, ಶನಿವಾರ) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ನಾಲ್ಕನೇ ದಿನವೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ. ಕಳೆದ ಮಂಗಳವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್​ಗೆ 15 ಪೈಸೆಯಂತೆ ಇಳಿಕೆ ಮಾಡಲಾಗಿತ್ತು. ಇದೇ ಸಮಯದಲ್ಲಿ ಡೀಸೆಲ್ ಬೆಲೆ ಕೂಡಾ 15 ಪೈಸೆ ಇಳಿಕೆ ಕಂಡಿತ್ತು. ಆ ಬಳಿ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ಪ್ರಮುಖ ಮಹಾನಗರಗಳಲ್ಲಿ 100ರ ಗಡಿ ದಾಟಿರುವ ಪೆಟ್ರೋಲ್ ಬೆಲೆ ಸುಮಾರು 19 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ಗಡಿ ದಾಟಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್​ ಈ ಪಟ್ಟಿಯಲ್ಲಿ ಸೇರಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಪ್ರತಿ ಲೀಟರ್​ಗೆ ರೂ. 100 ದಾಟಿದೆ.

ದೆಹಲಿ-ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.49 ರೂ. ಅದೇ ಸಮಯದಲ್ಲಿ, ಡೀಸೆಲ್ ಪ್ರತಿ ಲೀಟರ್‌ಗೆ 88.92 ರೂಪಾಯಿಯಾಗಿದೆ. ಮುಂಬೈನಲ್ಲಿಯೂ ಪೆಟ್ರೋಲ್ ಪ್ರತಿ ಲೀಟರ್‌ಗೆ 107.52 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 96.48 ರೂಪಾಯಿ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳ ಮತ್ತು ಭಾರೀ ತೆರಿಗೆಗಳಿಂದಾಗಿ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆ ಮಟ್ಟದಲ್ಲಿವೆ.

ಇನ್ನಿತರ ನಗರಗಳಲ್ಲಿನ ಇಂಧನ ದರ ಒಂದು ತಿಂಗಳ ಕಾಲ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಆಗಸ್ಟ್ ತಿಂಗಳ ಕೊನೆಯಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 98.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.49 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.06 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.82 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.98 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.98 ರೂಪಾಯಿ ಮತ್ತು ಡೀಸೆಲ್​ ದರ ಲೀಟರ್​ಗೆ 94.34 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel prices unchanged today august 28 check fuel rate in bangalore mumbai delhi and major city)

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ