ಮುಷ್ಕರಕ್ಕೆ ಮುಂದಾದ ಪೆಟ್ರೋಲ್ ಬಂಕ್ ಮಾಲೀಕರು, ಮೇ 31ಕ್ಕೆ ನೋ ಸ್ಟಾಕ್ ಫಲಕ ಪ್ರದರ್ಶನ

ಬ್ಯಾಂಕಿಂಗ್ ವಹಿವಾಟಿನಲ್ಲಿ ಆಗುತ್ತಿರುವ ತೊಂದರೆ ತಪ್ಪಿಸಲು ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ತೈಲ ಖರೀದಿ ನಿಲ್ಲಿಸುವ ಮೂಲಕ ಮೇ 31ರಂದು ಪ್ರತಿಭಟನೆ ನಡೆಸಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ.

ಮುಷ್ಕರಕ್ಕೆ ಮುಂದಾದ ಪೆಟ್ರೋಲ್ ಬಂಕ್ ಮಾಲೀಕರು, ಮೇ 31ಕ್ಕೆ ನೋ ಸ್ಟಾಕ್ ಫಲಕ ಪ್ರದರ್ಶನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 27, 2022 | 8:03 AM

ಬೆಂಗಳೂರು: ಬೆಲೆ ಏರಿಳಿತದಿಂದ ಡೀಲರ್​ಗಳಿಗೆ ರಕ್ಷಣೆ ಒದಗಿಸಬೇಕು, ಬೇಡಿಕೆಯಷ್ಟು ತೈಲ ಪೂರೈಸಬೇಕು ಮತ್ತು ಬ್ಯಾಂಕಿಂಗ್ ವಹಿವಾಟಿನಲ್ಲಿ ಆಗುತ್ತಿರುವ ತೊಂದರೆ ತಪ್ಪಿಸಲು ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ತೈಲ ಖರೀದಿ ನಿಲ್ಲಿಸುವ ಮೂಲಕ ಮೇ 31ರಂದು ಪ್ರತಿಭಟನೆ ನಡೆಸಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದಾರೆ. ಬಿಪಿಸಿಎಲ್ (Bharat Petroleum Corporation Limited – BPCL) ಮತ್ತು ಎಚ್‌ಪಿಸಿಎಲ್‌ (Hindustan Petroleum Corporation Limited – HPCL) ಕಂಪನಿಗಳ ನಿರ್ವಹಣೆಯಲ್ಲಿ ಆಗುತ್ತಿರುವ ವೈಫಲ್ಯದಿಂದಾಗಿ ಪೆಟ್ರೋಲ್ ಬಂಕ್ ಮಾಲೀಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಡೀಲರ್​ಗಳು ಹೇಳಿದ್ದಾರೆ.

ತಮ್ಮ ನಿರ್ಧಾರ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕರ್ನಾಟಕ ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟ (ಎಕೆಎಪ್‌ಪಿಟಿ), ‘ನಾವು ಸಲ್ಲಿಸುವ ಬೇಡಿಕೆಗೆ ತಕ್ಕಂತೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುತ್ತಿಲ್ಲ. ಹೀಗಾಗಿ ಬಂಕ್​ಗಳಲ್ಲಿ ‘ನೋ ಸ್ಟಾಕ್’ ಫಲಕ ಹಾಕುವಂತಾಗಿದೆ. ಸಾರಿಗೆ ಸಂಸ್ಥೆಗಳು ತಾವು ಖರೀದಿಸಿದ ಡೀಸೆಲ್ ಪ್ರಮಾಣಕ್ಕೆ ತಕ್ಕಷ್ಟು ಮೊತ್ತವನ್ನು ಪಾವತಿ ಮಾಡುತ್ತಿಲ್ಲ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ತೈಲಪೂರೈಕೆ ಕಂಪನಿಗಳು ಡೀಲರ್​ಗಳ ಮೇಲೆ ಅದರ ಪರಿಣಾಮ ವರ್ಗಾಯಿಸುತ್ತಿವೆ. ಬೇಡಿಕೆಗೆ ತಕ್ಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಮಾಡುತ್ತಿಲ್ಲ’ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಹಳೇ ವ್ಯವಸ್ಥೆ ಚೆನ್ನಾಗಿತ್ತು

ಹೊಸ ವ್ಯವಸ್ಥೆ ಜಾರಿಯಾಗುವ ಮೊದಲು ಚಾಲ್ತಿಯಲ್ಲಿದ್ದ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಬಂಕ್ ಮಾಲೀಕರು, ‘ಸಾಲದ ರೂಪದಲ್ಲಿ ಇಂಧನ ತಂದು ವ್ಯಾಪಾರವಾದ ಬಳಿಕ ಮರು ದಿನ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಈ ಹಿಂದೆ ಅನುಸರಿಸಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಮೊದಲೇ ಹಣ ಪಾವತಿಸಿ ಖರೀದಿ ಮಾಡಬೇಕಾಗಿದೆ. ಬ್ಯಾಂಕ್‌ ವಹಿವಾಟು ನಿಧಾನವಾದರೆ ವಿತರಕರು ತೊಂದರೆಗೆ ಸಿಲುಕುತ್ತಾರೆ. ಸಕಾಲಕ್ಕೆ ಹಣ ಪಾವತಿಸಿದರೂ ಬೇಡಿಕೆಗೆ ತಕ್ಕಷ್ಟು ಪೂರೈಕೆ ಬರುತ್ತಿಲ್ಲ’ ಎಂದು ಪೆಟ್ರೋಲ್ ಬಂಕ್ ಮಾಲೀಕರ ಪರಿಸ್ಥಿತಿ ವಿವರಿಸುತ್ತಾರೆ ಒಕ್ಕೂಟದ ಉಪಾಧ್ಯಕ್ಷ ಎ.ತಾರಾನಾಥ್.

ಬೆಲೆ ಇಳಿಸಿದಾಗ ನಷ್ಟ

ತೈಲೋತ್ಪನ್ನಗಳ ಬೆಲೆ ಏರಿಳಿದಿಂದಲೂ ವಿತರಕರಿಗೆ ನಷ್ಟವಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸಾಮಾನ್ಯವಾಗಿ ಕೆಲವೇ ಪೈಸೆಗಳ ಲೆಕ್ಕದಲ್ಲಿ ನಿಯಮಿತವಾಗಿ ಬೆಲೆ ಹೆಚ್ಚಿಸುತ್ತಾರೆ. ಆದರೆ ಬೆಲೆ ಇಳಿಸಬೇಕಾದ ಸಂದರ್ಭದಲ್ಲಿ ಮಾತ್ರ ಒಮ್ಮೆಲೆ 9 ರೂಪಾಯಿಗಟ್ಟಲೆ ಮೊತ್ತದಲ್ಲಿ ಹಣ ಇಳಿಸುತ್ತಾರೆ. ಹೀಗೆ ದರ ಇಳಿಕೆಯಾದಾಗ ಹಿಂದಿನ ದಿನ ಖರೀದಿಸಿ ದಾಸ್ತಾನು ಮಾಡಿಕೊಂಡಿದ್ದ ತೈಲವನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕಳೆದ ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಮಾಡಿದಾಗ ವಿತರಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು’ ಎಂದು ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

ಕಮಿಷನ್ ಏರಿಕೆಗೆ ಆಗ್ರಹ

ಕಳೆದ ಐದು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಪ್ಪಟ್ಟಾಗಿದೆ. ಆದರೆ ಕಮಿಷನ್ ಪ್ರಮಾಣ ಮಾತ್ರ ಮೊದಲು ಇದ್ದಷ್ಟೇ ಇದೆ. ಕಮಿಷನ್ ಹೆಚ್ಚಳಕ್ಕಾಗಿ ಕೇಂದ್ರ ಪೆಟ್ರೋಲಿಯಂ ಇಲಾಖೆ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನಮ್ಮ ಕಮಿಷನ್ ಮೊತ್ತವನ್ನು ಇವರು ಹೆಚ್ಚಿಸುವುದಿಲ್ಲ. ಆದರೆ ನಾವು ಮಾತ್ರ ಬಂಕ್​ಗಳ ಸಿಬ್ಬಂದಿಯ ವೇತನವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಲೇ ಇರಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರ ವ್ಯವಸ್ಥೆಗಳು ದುಬಾರಿಯಾಗುತ್ತಿದೆ. ಇದರಿಂದಾಗಿ ನಿರ್ವಹಣೆ ವೆಚ್ಚವೂ ಹೆಚ್ಚಾಗುತ್ತಿದೆ. ಹೀಗಾಗಿ ಕಮಿಷನ್ ಹೆಚ್ಚಿಸಬೇಕು ಎಂದು ಬಂಕ್ ಮಾಲೀಕರು ಒತ್ತಾಯಿಸುತ್ತಿದ್ದಾರೆ.

ಹೋರಾಟದಲ್ಲಿ ಭಾಗಿಯಲ್ಲ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಪೆಟ್ರೋಲ್ ಬಂಕ್​ಗಳಾದ ಶೆಲ್, ನಾಯರಾ ಮತ್ತು ಇತರ ಬಂಕ್‌ಗಳು ಈ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ. ಅವುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 am, Fri, 27 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್