Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?

|

Updated on: Nov 07, 2024 | 7:03 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 7, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ತೈಲ ಕಂಪನಿಗಳು ಇಂದು ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿದ್ದು, ರಾಜ್ಯ ಮಟ್ಟದಲ್ಲಿ ತೆರಿಗೆ ವಿಧಿಸಲಾಗುತ್ತದೆ.

Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?
ಪೆಟ್ರೋಲ್
Image Credit source: The Vanguard News
Follow us on

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 75.03 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ಭಾರತೀಯ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ತೈಲ ಕಂಪನಿಗಳು ಇಂದು ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿದ್ದು, ರಾಜ್ಯ ಮಟ್ಟದಲ್ಲಿ ತೆರಿಗೆ ವಿಧಿಸಲಾಗುತ್ತದೆ. ಈ ಕಾರಣದಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.03 ರೂ., ಡೀಸೆಲ್ ದರ 92.76 ರೂ.
ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ.
ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಇದೆ.
ನೋಯ್ಡಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 94.66 ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.
ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 94.99 ಮತ್ತು ಡೀಸೆಲ್ ಲೀಟರ್‌ಗೆ 87.85 ರೂ.

ಮತ್ತಷ್ಟು ಓದಿ: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ
ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.
ಪಾಟ್ನಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 105.16 ಮತ್ತು ಡೀಸೆಲ್ ಲೀಟರ್‌ಗೆ 92.37 ರೂ.

ನೀವು SMS ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಬಹುದು
ನೀವು ಪ್ರತಿದಿನ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು SMS ಮೂಲಕ ಪರಿಶೀಲಿಸಬಹುದು. ಇಂಡಿಯನ್ ಆಯಿಲ್ (IOCL) ಗ್ರಾಹಕರು RSP ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ