Petrol Price Today: ಇಂದೂ ಕೂಡಾ ಪೆಟ್ರೋಲ್​, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ ನೋಡಿ

Petrol Price | Diesel Price, 09.05.2022: ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

Petrol Price Today: ಇಂದೂ ಕೂಡಾ ಪೆಟ್ರೋಲ್​, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ ನೋಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:May 09, 2022 | 9:04 AM

ಇಂಧನ ದರ ಎಷ್ಟೇ ದುಬಾರಿಯಾದರೂ ದಿನನಿತ್ಯ ಜೀವನಕ್ಕೆ ಅಗತ್ಯ. ಮೊದಲೆಲ್ಲಾ ಎಷ್ಟೇ ದೂರವಿದ್ದರೂ ನಡೆದು ಹೋಗುತ್ತಿದ್ದರು. ಆದರೆ ಇಂದಿನ ದಿನಮಾನಗಳಲ್ಲಿ ಸ್ವಲ್ಪ ದೂರ ಹೋಗಬೇಕು ಅಂದರೂ ವಾಹನಗಳಿಗೆ ಅವಲಂಬಿತರಾಗಿದ್ದೇವೆ. ಹೀಗಾಗಿ ಇಂದಿನ ಇಂಧನ ದರ ಎಷ್ಟಿದೆ ಎಂದು ತಿಳಿದುಕೊಳ್ಳಲು ಕಾತುರರಾಗಿರುತ್ತಾರೆ. ಇಂದು ಕೂಡಾ ಪೆಟ್ರೋಲ್ (Petrol), ಡೀಸೆಲ್ ಬೆಲೆ (Diesel Price) ಸ್ಥಿರವಾಗಿದೆ. ಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Price) ಪ್ರತಿ ಲೀಟರ್​ಗೆ ಸರಾಸರಿ 10 ರೂಪಾಯಿಯಷ್ಟು ಹೆಚ್ಚಾಗಿತ್ತು. ಇಂದು (ಮೇ 08) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ​ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

Faf Duplessis: ಆತನಿಗೋಸ್ಕರ ನಾನು ಔಟಾಗಲು ರೆಡಿಯಿದ್ದೆ: ಪಂದ್ಯದ ಬಳಿಕ ಡುಪ್ಲೆಸಿಸ್ ಅಚ್ಚರಿ ಹೇಳಿಕೆ

PSI Recruitment Scam: ದಿವ್ಯಾ ಹಾಗರಗಿಗಿಂತಲೂ ಹೆಚ್ಚಿನ ಹಣ ಪಡೆದಿರುವ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯ ಹೆಡ್ ಮಾಸ್ಟರ್

Published On - 9:04 am, Mon, 9 May 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ