AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: 32 ದಿನಗಳಿಂದ ಸ್ಥಿರವಾಗಿದೆ ಪೆಟ್ರೋಲ್, ಡೀಸೆಲ್ ದರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂಧನ ಬೆಲೆ ಹೀಗಿದೆ

Petrol Price | Diesel Price, 08.05.2022: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

Petrol Price Today:  32 ದಿನಗಳಿಂದ ಸ್ಥಿರವಾಗಿದೆ ಪೆಟ್ರೋಲ್, ಡೀಸೆಲ್ ದರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂಧನ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 08, 2022 | 8:30 AM

Share

Petrol Diesel Price Today: ದೇಶದಲ್ಲಿ ಹೆಚ್ಚು- ಕಡಿಮೆ ಒಂದು ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಇಂದು (ಮೇ 08) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ​ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

PSI Recruitment Scam: ಮೊದಲ ಪತ್ರಿಕೆಯಲ್ಲೂ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಕೆ; ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ

Mother’s Day 2022: ಪ್ರೀತಿ, ಆರೈಕೆ, ಸಹನೆಯ “ಅಮ್ಮ” ನನ್ನ ಜಗತ್ತು..

Published On - 8:30 am, Sun, 8 May 22

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು