AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬದಲಾಗದ ಪೆಟ್ರೋಲ್, ಡೀಸೆಲ್ ದರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ

Petrol Price | Diesel Price, 10.05.2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

Petrol Price Today: ಬದಲಾಗದ ಪೆಟ್ರೋಲ್, ಡೀಸೆಲ್ ದರ; ಬೆಂಗಳೂರಿನಲ್ಲಿ ಇಂಧನ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:May 10, 2022 | 9:28 AM

Share

ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದ ಭಾರತಕ್ಕೆ ಹೊಡೆತ ಬಿದ್ದಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಇದೇ ಕಾರಣ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Price) ಪ್ರತಿ ಲೀಟರ್​ಗೆ ಸರಾಸರಿ 10 ರೂಪಾಯಿಯಷ್ಟು ಹೆಚ್ಚಾಗಿತ್ತು. ಇಂದು (ಮೇ 9) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ​ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ತುಮಕೂರಿನಲ್ಲಿ ಕಾರು, ಟಿಟಿ ವಾಹನ ನಡುವೆ ಡಿಕ್ಕಿ! ಇಬ್ಬರು ದುರ್ಮರಣ

ನಯನತಾರಾ-ವಿಘ್ನೇಶ್ ಮದುವೆ ವಿಚಾರದಲ್ಲಿ ಭುಗಿಲೆದ್ದ ಅಸಮಾಧಾನ

Published On - 9:28 am, Tue, 10 May 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್