ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದ ಭಾರತಕ್ಕೆ ಹೊಡೆತ ಬಿದ್ದಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಇದೇ ಕಾರಣ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Price) ಪ್ರತಿ ಲೀಟರ್ಗೆ ಸರಾಸರಿ 10 ರೂಪಾಯಿಯಷ್ಟು ಹೆಚ್ಚಾಗಿತ್ತು. ಇಂದು (ಮೇ 9) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ.
ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?:
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ
Published On - 9:28 am, Tue, 10 May 22