Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Price | Diesel Price Today 02.06.2022: ದೇಶದಲ್ಲಿ ಇಂಧನ ಸ್ಥಿರವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಇಂದು (ಜೂ.2) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Edited By:

Updated on: Jun 02, 2022 | 9:22 AM

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ 21ರಂದು ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಪರಿಣಾಮ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಗುರುವಾರ, ಜೂ.2) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
PMJJBY Insurance Premium: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಸುರಕ್ಷಾ ಬಿಮಾ ಯೋಜನೆ ವಿಮಾ ಕಂತುಗಳನ್ನು ಹೆಚ್ಚಿಸಿದ ಸರ್ಕಾರ
Gold- Silver Price: ಭಾರತದ ಪ್ರಮುಖ ನಗರಗಳಲ್ಲಿ ಜೂನ್ 1ರ ಬುಧವಾರದ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
Reliance brands: ಭಾರತದಲ್ಲಿ ಆಟಿಕೆ ಉತ್ಪಾದನೆಗೆ ಶಕ್ತಿ ತುಂಬಲು ರಿಲಯನ್ಸ್‌ ಮಹತ್ವದ ಹೆಜ್ಜೆ -ಜಂಟಿ ಒಪ್ಪಂದಕ್ಕೆ ಸಹಿ
GDP: ಜಿಡಿಪಿ ಅಂದರೇನು ಎಂಬುದರಿಂದ ಮೊದಲುಗೊಂಡು ದೇಶದ ಹಲವು ಆರ್ಥಿಕ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us