Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

Petrol price in Bengaluru | Diesel Price on 26.05.2022: ಮೇ 21ರ ಶನಿವಾರದಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 6 ರೂಪಾಯಿ ಸುಂಕವನ್ನು ಇಳಿಸಿ ಕೇಂದ್ರ ಘೋಷಿಸಿತ್ತು. ಅದರ ನಂತರ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:May 26, 2022 | 9:21 AM

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರದಂದು (ಮೇ.21) ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಮೇ.26) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
Bank Privatisation: ಸರ್ಕಾರದಿಂದ ಇನ್ನೆರಡು ಬ್ಯಾಂಕ್​ಗಳ ಖಾಸಗೀಕರಣ ಎನ್ನುತ್ತಿವೆ ಮೂಲಗಳು
Image
Gold Price Today: ಬೆಂಗಳೂರು, ಮುಂಬೈ, ದೆಹಲಿಯಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ ಹೆಚ್ಚಳ
Image
Master Card: ಮಾಸ್ಟರ್‌ಕಾರ್ಡ್‌ನ ಹೊಸ ‘ಪೇ ವಿತ್ ಸ್ಮೈಲ್ ಅಥವಾ ವೇವ್’ ಪಾವತಿ ವ್ಯವಸ್ಥೆ ಬಗ್ಗೆ ನಿಮಗೆಷ್ಟು ಗೊತ್ತು?
Image
8 Years Of Narendra Modi Government: ನವೀಕೃತ ಇಂಧನದಲ್ಲಿ ನರೇಂದ್ರ ಮೋದಿ ಸರ್ಕಾರದ ಎತ್ತರದ ಸಾಧನೆ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.35, ಡೀಸೆಲ್: ಪ್ರತಿ ಲೀಟರ್‌ಗೆ ₹ 89.55

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 am, Thu, 26 May 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್