AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Price | Diesel Price Today 03.06.2022: ದೇಶದಲ್ಲಿ ಇಂಧನ ಸ್ಥಿರವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಇಂದು (ಜೂ.3) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Price Today: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 03, 2022 | 9:08 AM

Share

ಮೇ 21ರಂದು ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಲಾಗಿತ್ತು. ಪರಿಣಾಮ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಶುಕ್ರವಾರ, ಜೂ.3) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 2ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?
Image
Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ
Image
Flexi Benefits Plan: ಫ್ಲೆಕ್ಸಿಬಲ್ ಬೆನಿಫಿಟ್ಸ್ ಪ್ಲಾನ್ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ತಿಳಿದುಕೊಳ್ಳಬೇಕಾದ ಮಾಹಿತಿ
Image
Mobile Call Tariff: ಹಲೋ, ಮೊಬೈಲ್ ಫೋನ್ ಕರೆ ದರಗಳ ಏರುವ ಸಾಧ್ಯತೆಯಿದೆ ಗಮನಿಸಿ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More