AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Price | Diesel Price Today 07.06.2022: ದೇಶದಲ್ಲಿ ಇಂಧನ ಸ್ಥಿರವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಇಂದು (ಜೂ.7) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 07, 2022 | 9:15 AM

Share

ಬೆಂಗಳೂರು: ಮೇ 21ರಂದು ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಲಾಗಿತ್ತು. ಪರಿಣಾಮ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಮಂಗಳವಾರ, ಜೂ.7) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
Elon Musk Twitter Deal: ಟ್ವಿಟ್ಟರ್​ ಜತೆ ಒಪ್ಪಂದ ಕೊನೆಗೊಳಿಸುವ ಬಗ್ಗೆ ಎಲಾನ್ ಮಸ್ಕ್ ಪತ್ರ ಹೇಳುವುದೇನು?
Image
LIC Share: 6 ಲಕ್ಷ ಕೋಟಿ ರೂಪಾಯಿಗಿಂತ ಕೆಳಗಿಳಿದ ಎಲ್​ಐಸಿ ಮಾರುಕಟ್ಟೆ ಮೌಲ್ಯ
Image
Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ ದಿಢೀರನೆ 700 ರೂ. ಹೆಚ್ಚಳ
Image
RBI Clarification About Currency: ಕರೆನ್ಸಿಗಳಲ್ಲಿ ಗಾಂಧಿ ಚಿತ್ರವನ್ನು ಬದಲಿಸುವ ಪ್ರಸ್ತಾವ ಇಲ್ಲ ಎಂದ ಆರ್​ಬಿಐ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ