Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol Price | Diesel Price on 19.05.2022: ದೇಶದಲ್ಲಿ ಕಳೆದ 6 ವಾರಗಳಿಂದ ಇಂಧನ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: May 19, 2022 | 9:38 AM

ಕೆಲವು ವರದಿಗಳ ಪ್ರಕಾರ ಸರ್ಕಾರವು ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಬ್ಯುಸಿನೆಸ್ ಟುಡೆ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಅದರಲ್ಲಿ ಒಂದೇ ಬಾರಿ ದರವನ್ನು ಏರಿಸದೇ ಶ್ರೇಣೀಕೃತ ಮಾದರಿಯಲ್ಲಿ ಏರಿಸುವ ಪ್ರಸ್ತಾಪವಿದೆ ಎಂದು ಮಾಹಿತಿ ನೀಡಲಾಗಿದೆ. ಪೆಟ್ರೋಲ್​ಗಿಂತಲೂ ಡೀಸೆಲ್ ದರದಲ್ಲಿ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈ ನಡುವೆ ಇಂದು (ಮೇ 19) ದೇಶದಲ್ಲಿ ಇಂಧನ ದರದಲ್ಲಿ ಏರಿಕೆ ಕಂಡುಬಂದಿಲ್ಲ. ಪ್ರಸ್ತುತ ಕಳೆದ ಆರು ವಾರಗಳಿಂದ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿದೆ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Image
LPG Price Hike: ಗೃಹ ಬಳಕೆ ಸಿಲಿಂಡರ್ ಬೆಲೆ ರೂ 3.50 ಹೆಚ್ಚಳ: ಹಣದುಬ್ಬರದ ಬಿಸಿ ಹೆಚ್ಚಿಸಿದ ಬೆಲೆ ಏರಿಕೆ ನಿರ್ಧಾರ
Image
INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತ ರೂಪಾಯಿ ಮೇ 18ಕ್ಕೆ ಎಷ್ಟಿದೆ?
Image
Gold Buying Tips: ಚಿನ್ನವನ್ನು ಖರೀದಿಸುತ್ತಿದ್ದೀರಾ? ಹಾಗಿದ್ದರೆ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ
Image
Vedantu Layoff: ವೇದಾಂತು ಕಂಪೆನಿಯಿಂದ ಶೇಕಡಾ 7ರಷ್ಟು ಅಥವಾ 424 ಉದ್ಯೋಗಿಗಳ ವಜಾ

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ