AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on October 31: ಬೆಂಗಳೂರು, ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಘೋಷಿಸಿಲ್ಲ. 5 ತಿಂಗಳಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on October 31: ಬೆಂಗಳೂರು, ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ದರ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 31, 2022 | 9:07 AM

Share

Fuel Price on October 31: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಇಂದು (ಸೋಮವಾರ) ಇಂಧನದ ಬೆಲೆಯನ್ನು ನವೀಕರಿಸಿದೆ. ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಘೋಷಿಸಿಲ್ಲ. 5 ತಿಂಗಳಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಬದಲಾವಣೆಯಾಗಿಲ್ಲ. ಕೊನೆಯ ಬಾರಿಗೆ ಕೇಂದ್ರ ಸರ್ಕಾರವು ಮೇ 22ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಈ ವರ್ಷದ ಮೇ ಅಂತ್ಯದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ಲೀಟರ್‌ಗೆ 8 ಮತ್ತು 6 ರೂ.ಗಳಷ್ಟು ಕಡಿತಗೊಳಿಸಿದ ಬಳಿಕ ಇಂಧನದ ಬೆಲೆ ಪರಿಷ್ಕೃತಗೊಂಡಿಲ್ಲ.

ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಇದನ್ನೂ ಓದಿ: Petrol Price Today: ಇಳಿಕೆಯಾಯಿತಾ ಪೆಟ್ರೋಲ್ ಬೆಲೆ?; ನಿಮ್ಮ ನಗರಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಹೆಚ್ಚಾಗಿ ಡಾಲರ್ ದರದಿಂದ ಪ್ರಭಾವಿತವಾಗಿರುತ್ತದೆ. ಡಾಲರ್ ದುಬಾರಿಯಾಗಿದ್ದರೆ, ಕಚ್ಚಾ ತೈಲವನ್ನು ಖರೀದಿಸುವುದು ಹೆಚ್ಚು ದುಬಾರಿಯಾಗಬಹುದು ಮತ್ತು ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನರು ಪಾವತಿಸುವ ಅರ್ಧಕ್ಕಿಂತ ಹೆಚ್ಚು ಹಣವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ತೆರಿಗೆ ರೂಪದಲ್ಲಿದೆ. ಜನರಿಂದ ಪೆಟ್ರೋಲ್ ಮೇಲೆ ಶೇ.55.5 ಮತ್ತು ಡೀಸೆಲ್ ಮೇಲೆ ಶೇ.47.3 ತೆರಿಗೆ ಸಂಗ್ರಹವಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ