Petrol Price Today: ದೀಪಾವಳಿ ಬಂಪರ್ ಕೊಡುಗೆ; ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಯಾದ ಬಳಿಕ ಇಂದಿನ ರೇಟ್ ಎಷ್ಟಿದೆ ಗೊತ್ತಾ?
Petrol Rate Today, 05-11-2021: ಇಂದು ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ನಿಮ್ಮೂರಿನಲ್ಲಿ ಲೀಟರ್ ಪೆಟ್ರೋಲ್ಗೆ ಎಷ್ಟು ಇಳಿಕೆಯಾಗಿದೆ? ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.
Petrol Diesel Price Today | ದೆಹಲಿ: ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ (ನವೆಂಬರ್ 5) ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂದು ತಿಳಿಯಿರಿ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟು ಪೆಟ್ರೋಲ್ 13 ರೂಪಾಯಿ, ಡಿಸೇಲ್ 19.56 ರೂಪಾಯಿ ಇಳಿಕೆ ಮಾಡಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ ಎಂಬ ಮಾಹಿತಿ ತಿಳಿಯಿರಿ. ದೇಶಾದ್ಯಂತ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಇಳಿಕೆ ಹಿನ್ನೆಲೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ (Diesel Price) 86.67 ರೂಪಾಯಿ ದಾಖಲಾಗಿದೆ.
ದೀಪಾವಳಿಯ ಮುನ್ನಾದಿನದಂದು ಕೆಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ಗಂಟೆಗಳ ನಂತರ ಹಲವಾರು ರಾಜ್ಯಗಳು ಇಂಧನ ಬೆಲೆಯಲ್ಲಿ ಹೆಚ್ಚುವರಿ ಕಡಿತವನ್ನು ಘೋಷಿಸಿದವು. ರಾಜ್ಯಗಳು ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ಅನ್ನು ಮೂಲ ಬೆಲೆಯ ಮೇಲೆ ಮಾತ್ರವಲ್ಲದೇ ಕೇಂದ್ರವೂ ವಿಧಿಸುವ ಅಬಕಾರಿ ಸುಂಕದ ಮೇಲೂ ನಿರ್ಧರಿಸುವುದರಿಂದ ಹೆಚ್ಚು ವ್ಯಾಟ್ ಹೊಂದಿರುವ ರಾಜ್ಯಗಳಲ್ಲಿ ಕಡಿವು ದೊಡ್ಡ ಮಟ್ಟದ್ದಾಗಿದೆ.
ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿಗೆ ಇಳಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ 5.87 ರೂಪಾಯಿ ಇಳಿಕೆ ಬಳಿಕ 109.98 ರೂಪಾಯಿ ನಿಗದಿಯಾಗಿದೆ. ಲೀಟರ್ ಡೀಸೆಲ್ ದರದಲ್ಲಿ 12.34 ರೂಪಾಯಿ ಇಳಿಕೆ ಬಳಿಕ 94.14 ರೂಪಾಯಿ ದಾಖಲಾಗಿದೆ.
ನಿರಂತರವಾಗಿ ಏರುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ನೋಡಿ ಗ್ರಾಹಕರು ಆಕ್ರೋಶ ಹೊರಹಾಕಿದ್ದರು. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ದೀಪಾವಳಿಗೆ ವಾಹನ ಸವಾರರಿಗೆ ಸರ್ಕಾರದಿಂದ ಬಂಪರ್ ಗಿಫ್ಟ್ ಸಿಕ್ಕಂತಾಗಿದೆ. ಬೆಂಗಳೂರಿನಲ್ಲಿಂದು ಲೀಟರ್ ಪೆಟ್ರೋಲ್ 100.58 ರೂಪಾಯಿ ಹಾಗೂ ನಗರದಲ್ಲಿ ಲೀಟರ್ ಡೀಸೆಲ್ ಬೆಲೆ 85.01 ರೂಪಾಯಿ ದಾಖಲಾಗಿದೆ. ರಾಜ್ಯ ಸರ್ಕಾರವೂ ಜನರಿಗೆ ದೀಪಾವಳಿ ಬಂಪರ್ ಕೊಡುಗೆ ನೀಡಿದ್ದು ಮೈಸೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 100.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 84.56 ರೂಪಾಯಿ ನಿಗದಿಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm
Published On - 7:27 am, Fri, 5 November 21