Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ?; ಇಲ್ಲಿದೆ ಮಾಹಿತಿ

Petrol Rate Today, 06-11-2021: ಇಂದು ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ನಿಮ್ಮೂರಿನಲ್ಲಿ ಲೀಟರ್ ಪೆಟ್ರೋಲ್​ಗೆ ಎಷ್ಟು ಇಳಿಕೆಯಾಗಿದೆ? ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ?; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Edited By:

Updated on: Nov 06, 2021 | 8:41 AM

Petrol Diesel Price Today | ದೆಹಲಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕ ಇಳಿಕೆ ಹಿನ್ನೆಲೆಯಲ್ಲಿ ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಇಳಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟು ಪೆಟ್ರೋಲ್​ 13 ರೂಪಾಯಿ, ಡೀಸೆಲ್ 19.56 ರೂಪಾಯಿ ಇಳಿಕೆ ಮಾಡಿದೆ. ದೇಶಾದ್ಯಂತ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಇಳಿಕೆ ಹಿನ್ನೆಲೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 103.97 ರೂಪಾಯಿ ಹಾಗೂ ಲೀಟರ್​  ಡೀಸೆಲ್ ಬೆಲೆ (Diesel Price) 86.67  ರೂಪಾಯಿ ದಾಖಲಾಗಿದೆ.

ದೀಪಾವಳಿಯ ಮುನ್ನಾದಿನದಂದು ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ಗಂಟೆಗಳ ನಂತರ ಹಲವಾರು ರಾಜ್ಯಗಳು ಕೂಡ ಇಂಧನ ಬೆಲೆ ಕಡಿತಗೊಳಿಸಿದವು. ರಾಜ್ಯಗಳು ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ಅನ್ನು ಮೂಲ ಬೆಲೆಯ ಮೇಲೆ ಮಾತ್ರವಲ್ಲದೇ ಕೇಂದ್ರವೂ ವಿಧಿಸುವ ಅಬಕಾರಿ ಸುಂಕದ ಮೇಲೂ ನಿರ್ಧರಿಸುವುದರಿಂದ ಹೆಚ್ಚು ವ್ಯಾಟ್ ಹೊಂದಿರುವ ರಾಜ್ಯಗಳಲ್ಲಿ ಕಡಿತವು ದೊಡ್ಡ ಮಟ್ಟದ್ದಾಗಿದೆ.

ಸುಂಕ ಕಡಿತ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ, ಕರ್ನಾಟಕ, ಪುದುಚೇರಿ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ, ಸಿಕ್ಕಿಂ, ಬಿಹಾರ, ಮಧ್ಯಪ್ರದೇಶ, ಗೋವಾ, ಗುಜರಾತ್, ದಾದ್ರಾ ಮತ್ತು ಇತರ ರಾಜ್ಯಗಳಿವೆ. ಇದರೊಂದಿಗೆ ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ, ನಗರ ಹವೇಲಿ, ದಮನ್ ಮತ್ತು ದಿಯು, ಚಂಡೀಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಲಡಾಖ್​ನಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿತವಾಗಿದೆ.

ಸುಂಕ ಕಡಿತದ ನಂತರ, ಈಗ ರಾಜಸ್ಥಾನದ ಜೈಪುರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್​ಗೆ ರೂ 111.10 ಆಗಿದೆ. ಮುಂಬೈನಲ್ಲಿ ₹ 109.98 ಮತ್ತು ಆಂಧ್ರಪ್ರದೇಶ ₹ 109.05 ದರವಿದೆ. ಮತ್ತೊಂದೆಡೆ, ಬಿಜೆಪಿ ಆಡಳಿತವಿರುವ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಿಂತ ಕಡಿಮೆಯಾಗಿದೆ. ಆದರೆ, ಮಧ್ಯಪ್ರದೇಶದಲ್ಲಿ 107.23 ರೂ., ಬಿಹಾರದಲ್ಲಿ 105.90 ರೂ ದರ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 100.58 ರೂಗಳಿದೆ.

ಡೀಸೆಲ್ ಬೆಲೆಯ ವಿಚಾರಕ್ಕೆ ಬರುವುದಾದರೆ, ರಾಜಸ್ಥಾನದ ಜೈಪುರದಲ್ಲಿ ಲೀಟರ್‌ಗೆ 95.71 ರೂ, ಆಂಧ್ರಪ್ರದೇಶದಲ್ಲಿ 95.18 ರೂ., ಮುಂಬೈನಲ್ಲಿ ಲೀಟರ್‌ಗೆ 94.14 ರೂ ಇದೆ. ಮಿಜೋರಾಂನಲ್ಲಿ ಡೀಸೆಲ್​ಗೆ ಕಡಿಮೆ ದರವಿದ್ದು, ಪ್ರತಿ ಲೀಟರ್‌ಗೆ 79.55 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 85.01 ರೂ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm