AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ! LPG ಸಿಲಿಂಡರ್ ದರ ಕೂಡ ಹೆಚ್ಚಳ

Petrol Diesel Price Today, 22-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Hike: ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ! LPG ಸಿಲಿಂಡರ್ ದರ ಕೂಡ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 22, 2022 | 8:58 AM

Share

Petrol Diesel Price Today| ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.21 ರೂಪಾಯಿ, ಡೀಸೆಲ್ ಲೀಟರ್​ಗೆ 87.47 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ಗೆ 102.16 ರೂಪಾಯಿ, ಡೀಸೆಲ್​ ಲೀಟರ್​ಗೆ 92.19 ರೂಪಾಯಿ, ಮುಂಬೈನಲ್ಲಿ ಲೀಟರ್​ಗೆ ಪೆಟ್ರೋಲ್ ಬೆಲೆ 110.82 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.00 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 90.62 ರೂಪಾಯಿ ಆಗಿದೆ. ಮಾರ್ಚ್ 10 ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.

ಸೋಮವಾರ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿತ್ತು. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿತ್ತು. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು. ಇಂದು (ಮಾರ್ಚ್  22, ಮಂಗಳವಾರ) ಕೂಡ ಇಂಧನ ದರದಲ್ಲಿ(Fuel Rate) 80 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.80 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.82 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.00 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.19 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.50 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.09 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.12 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.61 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. ಅದರಂತೆ 14.2 ಕೆಜಿಯ LPG ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ. ಇಂದಿನಿಂದಲೇ ಅನ್ವಯವಾಗುವಂತೆ (ಮಾರ್ಚ್ 22, 2022) ಈ ದರ ಏರಿಕೆ ಮಾಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:42 am, Tue, 22 March 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ