AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: ಏಪ್ರಿಲ್ 1ರ ಪೆಟ್ರೋಲ್, ಡೀಸೆಲ್ ಬೆಲೆ ಘೋಷಣೆ; ಇಂಧನ ದರ ಇಲ್ಲಿ ಪರಿಶೀಲಿಸಿ

Petrol Diesel Price Today, 01-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Hike: ಏಪ್ರಿಲ್ 1ರ ಪೆಟ್ರೋಲ್, ಡೀಸೆಲ್ ಬೆಲೆ ಘೋಷಣೆ; ಇಂಧನ ದರ ಇಲ್ಲಿ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 01, 2022 | 8:28 AM

Share

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದ್ದು,. ಸತತ ಬೆಲೆ ಏರಿಕೆಯ ಬಳಿಕ ಇಂದು (ಏಪ್ರಿಲ್ 1, 2022) ಇಂಧನ ದರದಲ್ಲಿ ಯಾವುದೇ ಏರಿಕೆ, ಇಳಿಕೆ ಆಗಿಲ್ಲ. ಅದರಂತೆ ಶುಕ್ರವಾರ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇತ್ತು. ಅದರ ಪರಿಣಾಮ ಕಳೆದ 11 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 6.40 ಹೆಚ್ಚಾಗಿದೆ. ಈ 11 ದಿನಗಳಲ್ಲಿ ಇದು ಎರಡನೇ ಬಾರಿಗೆ ಇಂಧನ ದರ ಏರಿಕೆಯಾಗದೇ ಉಳಿದುಕೊಂಡಿದೆ. ಏಪ್ರಿಲ್ ತಿಂಗಳ ಮೊದಲ ದಿನ ಜನರಿಗೆ ಮತ್ತೆ ಇಂಧನ ದರ ಏರಿಕೆಯ ಬಿಸಿ ಮುಟ್ಟುವುದು ತಪ್ಪಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಯಿತು. ಈವರೆಗಿನ ಸರಾಸರಿ ಲೆಕ್ಕಹಾಕಿದರೆ ಕಳೆದ 11 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು ₹ 6.40ರಷ್ಟು ಹೆಚ್ಚಾಗಿದೆ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 101.81 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 93.07 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 116.72, ಡೀಸೆಲ್ ₹ 100.94ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 107.45 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.52 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 111.35 ರೂ. ಡೀಸೆಲ್ ಬೆಲೆ ಲೀಟರ್​ಗೆ 96.22 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.27 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 115.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.58 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 101.71 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.94 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 113.27 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.22 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.  ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 8:23 am, Fri, 1 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್