Petrol Diesel Price Hike: ಮತ್ತೆ ಏರಿಕೆ: ಬೆಂಗಳೂರಿನಲ್ಲಿ 110 ರೂಪಾಯಿ ದಾಟಿತು ಪೆಟ್ರೋಲ್, 15 ದಿನಗಳಲ್ಲಿ ಭಾರಿ ಏರಿಕೆ ಕಂಡ ಇಂಧನ ಬೆಲೆ

ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಯಿತು.

Petrol Diesel Price Hike: ಮತ್ತೆ ಏರಿಕೆ: ಬೆಂಗಳೂರಿನಲ್ಲಿ 110 ರೂಪಾಯಿ ದಾಟಿತು ಪೆಟ್ರೋಲ್, 15 ದಿನಗಳಲ್ಲಿ ಭಾರಿ ಏರಿಕೆ ಕಂಡ ಇಂಧನ ಬೆಲೆ
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 05, 2022 | 7:18 AM

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂದಿನ ಬೆಲೆ ಏರಿಕೆಯ ಬಳಿಕ (ಏಪ್ರಿಲ್ 5, 2022) ಇಂಧನ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಮಾರ್ಚ್ 22ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ (15 ದಿನ) ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ ಪ್ರತಿ ಲೀಟರ್​ಗೆ ಸರಾಸರಿ ₹ 9.59ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಯಿತು. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್​ಗೆ 80 ಪೈಸೆ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್​ಗೆ 84 ಪೈಸೆ ಹೆಚ್ಚಾಗಿದ್ದು, ₹ 110.25ಕ್ಕೆ ಮಾರಾಟವಾಗುತ್ತಿದೆ. ಡೀಸೆಲ್ ದರ ಲೀಟರ್​ಗೆ 78 ಪೈಸೆ ಹೆಚ್ಚಾಗಿದ್ದು ₹ 94.01ಕ್ಕೆ ಮಾರಾಟವಾಗುತ್ತಿದೆ. ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಪೆಟ್ರೋಲ್ ₹ 9.59 ಹಾಗೂ ಡೀಸೆಲ್ ₹ 8.98ರಷ್ಟು ಹೆಚ್ಚಾಗಿದೆ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 104.61 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 95.87 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ಗೆ 84 ಪೈಸೆ ಮ್ತು ಡೀಸೆಲ್​ಗೆ 85 ಪೈಸೆ ಹೆಚ್ಚಿಸಲಾಗಿದೆ. ಅಲ್ಲೀಗ ಪೆಟ್ರೋಲ್​ ₹ 119.67, ಡೀಸೆಲ್ ₹ 103.92ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ಗಳನ್ನು ತಲಾ 77 ಪೈಸೆಯಷ್ಟು ಹೆಚ್ಚಿಸಲಾಗಿದೆ. ಅಲ್ಲಿ ಲೀಟರ್ ಪೆಟ್ರೋಲ್ ದರ 110.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.19 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 91 ಪೈಸೆ, ಡೀಸೆಲ್ ಬೆಲೆ 87 ಪೈಸೆ ಏರಿಕೆಯಾಗಿದೆ. ಅಲ್ಲಿ ಪೆಟ್ರೋಲ್ ₹ 118.59, ಡೀಸೆಲ್ ₹ 104.62ಕ್ಕೆ ಮಾರಾಟವಾಗುತ್ತಿದೆ. ತಿರುವನಂತಪುರದಲ್ಲಿ ಪೆಟ್ರೋಲ್ 98 ಪೈಸೆ, ಡೀಸೆಲ್ 95 ಪೈಸೆ ಹೆಚ್ಚಾಗಿದೆ. ಅಲ್ಲಿ ಪೆಟ್ರೋಲ್ ₹ 116, ಡೀಸೆಲ್ ₹ 103.11 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.23 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 117.68 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.75 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 115.34 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 102.16 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.09 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 103.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.09 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ