AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: 110 ರೂ. ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್! ಡೀಸೆಲ್ ಬೆಲೆಯೂ ಏರಿಕೆ; ವಾಹನ ಸವಾರರ ಕತೆ ಕೇಳೋರಿಲ್ಲ

Petrol Diesel Price Today, 06-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Hike: 110 ರೂ. ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್! ಡೀಸೆಲ್ ಬೆಲೆಯೂ ಏರಿಕೆ; ವಾಹನ ಸವಾರರ ಕತೆ ಕೇಳೋರಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 06, 2022 | 7:54 AM

Share

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂದು ಕೂಡ (ಏಪ್ರಿಲ್ 6, 2022) ಇಂಧನ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ (16 ದಿನ) ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲಯನ್ನು ಲೀಟರ್​ಗೆ 80 ಪೈಸೆಯಷ್ಟು ಹೆಚ್ಚಿಸಲಾಗಿದೆ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.  ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್