AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಮುಂಬೈಯಲ್ಲಿ ಪೆಟ್ರೋಲ್, ಡೀಸೆಲ್​ಗೆ ದಾಖಲೆಯ ರೇಟ್! ಇಂಧನ ದರ ಇಲ್ಲಿ ಪರಿಶೀಲಿಸಿ

Petrol Diesel Price Today, 09-04-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Today: ಮುಂಬೈಯಲ್ಲಿ ಪೆಟ್ರೋಲ್, ಡೀಸೆಲ್​ಗೆ ದಾಖಲೆಯ ರೇಟ್! ಇಂಧನ ದರ ಇಲ್ಲಿ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 09, 2022 | 9:13 AM

Share

Petrol Diesel Price Today | ದೆಹಲಿ: ಭಾರತದಲ್ಲಿ ಕಳೆದ ಮೂರು ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಾಣದೆ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿತ್ತು. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇತ್ತು. ಈ ಮಧ್ಯೆ, ಇಂದು (ಏಪ್ರಿಲ್ 9, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಪರಿಣಾಮವಾಗಿ ಕಳೆದ 19 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.  ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 9:12 am, Sat, 9 April 22

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ