AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ! ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ?

Petrol Diesel Price Today, 23-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Price Hike: ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ! ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 23, 2022 | 11:01 AM

Petrol Diesel Price Today| ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮಂಗಳವಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ ಗೆ 78 ಪೈಸೆ ಹೆಚ್ಚಳ ಮಾಡಲಾಗಿತ್ತು. ಇದೀಗ ಇಂದು ಮತ್ತೆ (ಮಾರ್ಚ್ 23, ಬುಧವಾರ) ಪೆಟ್ರೋಲ್, ಡೀಸೆಲ್ ಬೆಲೆ 84 ಪೈಸೆ ಏರಿಕೆ ಮಾಡಲಾಗಿದೆ. ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಬಿಸಿ ಮುಟ್ಟಿಸಿದೆ. ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 97.01 ರೂಪಾಯಿ, ಡೀಸೆಲ್ ಲೀಟರ್​ಗೆ 88.27 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ಗೆ 102.91 ರೂಪಾಯಿ, ಡೀಸೆಲ್​ ಲೀಟರ್​ಗೆ 92.95 ರೂಪಾಯಿ, ಮುಂಬೈನಲ್ಲಿ ಲೀಟರ್​ಗೆ ಪೆಟ್ರೋಲ್ ಬೆಲೆ 111.67 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.85 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.34 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 91.42 ರೂಪಾಯಿ ಆಗಿದೆ. ಮತ್ತೆ ಬೆಲೆ ಏರಿಕೆ ಮೂಲಕ ದರ ಬದಲಾವಣೆ ಆಗಲಿರುವ ಬಗ್ಗೆ ಸೂಚನೆ ಲಭಿಸಿದೆ. ಈ ಮೊದಲು, ಮಾರ್ಚ್ 10 ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.

ಸೋಮವಾರ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿತ್ತು. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿತ್ತು. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.50 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.09 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.12 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.88 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.41 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 112.46 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 95.62 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 108.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.52 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 82.02 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:32 am, Wed, 23 March 22

ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?