Petrol Diesel Price: ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರದ ವಿವರ ಹೀಗಿದೆ

Petrol Diesel Price Today, 24-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

Petrol Diesel Price: ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರದ ವಿವರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 24, 2022 | 7:34 AM

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮಂಗಳವಾರ (ಮಾರ್ಚ್ 22) ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ಗೆ 78 ಪೈಸೆ ಹೆಚ್ಚಳ ಮಾಡಲಾಗಿತ್ತು. ಅದಾದ ನಂತರ ನಿನ್ನೆ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 84 ಪೈಸೆ ಏರಿಕೆ ಮಾಡಲಾಗಿತ್ತು. ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಬಿಸಿ ಮುಟ್ಟಿಸಿತ್ತು. ಆದರೆ ಇಂದು ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಸ್ಥಿರತೆ ಇದೆ.

ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 97.01 ರೂಪಾಯಿ, ಡೀಸೆಲ್ ಲೀಟರ್​ಗೆ 88.27 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ಗೆ 102.91 ರೂಪಾಯಿ, ಡೀಸೆಲ್​ ಲೀಟರ್​ಗೆ 92.95 ರೂಪಾಯಿ, ಮುಂಬೈನಲ್ಲಿ ಲೀಟರ್​ಗೆ ಪೆಟ್ರೋಲ್ ಬೆಲೆ 111.67 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.85 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.34 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 91.42 ರೂಪಾಯಿ ಆಗಿದೆ. ಮತ್ತೆ ಬೆಲೆ ಏರಿಕೆ ಮೂಲಕ ದರ ಬದಲಾವಣೆ ಆಗಲಿರುವ ಬಗ್ಗೆ ಸೂಚನೆ ಲಭಿಸಿದೆ. ಈ ಮೊದಲು, ಮಾರ್ಚ್ 10ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.

ಸೋಮವಾರ (ಮಾರ್ಚ್ 21) ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿತ್ತು. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿತ್ತು. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು.

ಬೆಂಗಳೂರಿನಲ್ಲಿ ಪ್ರಸ್ತುತ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.50 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.09 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.12 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.88 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.41 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 112.46 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 95.62 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 108.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.52 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 82.02 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: Russia Ukraine Conflict: ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ ಎಂದ ಝೆಲೆನ್​ಸ್ಕಿ: ರಷ್ಯಾ ಉಕ್ರೇನ್ ಸಂಘರ್ಷದ 10 ಪ್ರಮುಖ ಬೆಳವಣಿಗೆಗಳಿವು

ಇದನ್ನೂ ಓದಿ: Russia Ukraine War: ಪುಟಿನ್ ಕೆಟ್ಟೋನು ಅಂತ್ಲೇ ಅಂದ್ಕೊಳಿ: ರಷ್ಯಾ ಉಕ್ರೇನ್ ಯುದ್ಧ ನೋಡುವ ಮೂರು ಕ್ರಮಗಳಿವು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್