
Petrol Diesel Price Today| ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ (Petrol Price) ಹಾಗೂ ಡೀಸೆಲ್ ಬೆಲೆಯಲ್ಲಿ (Diesel Price) ಏರಿಕೆಯಾಗಿತ್ತು. ಅದಾದ ನಂತರ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 84 ಪೈಸೆ ಏರಿಕೆ ಮಾಡಲಾಗಿತ್ತು. ನಿನ್ನೆ ಕೂಡ ಇಂಧನ ದರದಲ್ಲಿ ಏರಿಕೆಯಾಗಿದೆ. ಇದೀಗ ಶನಿವಾರವಾದ ಇಂದು(ಮಾರ್ಚ್ 26) ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆ ಮೂಲಕ ಒಂದೇ ವಾರದಲ್ಲಿ ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ₹ 98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹ 89.87 ದಾಖಲಾಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ ₹ 113.35, ಡೀಸೆಲ್ ₹ 97.55 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.14 ರೂಪಾಯಿ ದಾಖಲಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm
Published On - 7:34 am, Sat, 26 March 22