Petrol Diesel Price Hike: 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

Petrol Diesel Price Today, 27-03-2022: ಮಾರ್ಚ್ 22 ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 27, ಭಾನುವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 50 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 55 ಪೈಸೆ ಏರಿಕೆ ಮಾಡಲಾಗಿದೆ.

Petrol Diesel Price Hike: 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Edited By:

Updated on: Mar 27, 2022 | 8:40 AM

Petrol Diesel Price Today| ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಸದ್ಯ ಮೊದಲ ಬಾರಿಗೆ ಮಾರ್ಚ್ 22 ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 27, ಭಾನುವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 50 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 55 ಪೈಸೆ ಏರಿಕೆ ಮಾಡಲಾಗಿದೆ. ಅದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.11 ರೂಪಾಯಿ, ಲೀಟರ್ ಡೀಸೆಲ್ ಬೆಲೆ 90.42 ರೂಪಾಯಿ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 53 ಪೈಸೆ ಹೆಚ್ಚಳ ಮಾಡಲಾಗಿದ್ದು, ಲೀಟರ್ ಡೀಸೆಲ್ ಬೆಲೆ 58 ಪೈಸೆ ಹೆಚ್ಚಳವಾಗಿದೆ. ಅದರ ಅನ್ವಯ ಮುಂಬೈ ಲೀಟರ್ ಪೆಟ್ರೋಲ್ 113.88 ರೂಪಾಯಿ ಹಾಗೂ ಡೀಸೆಲ್ 98.13 ರೂಪಾಯಿ ಆಗಿದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಇಂದು ಪೆಟ್ರೋಲ್ 50 ಪೈಸೆ ಏರಿಕೆ, ಲೀಟರ್ ಡೀಸೆಲ್ 55 ಪೈಸೆ ಏರಿಕೆ ಆಗಿದೆ. ಅದರಂತೆ, ಲೀಟರ್ ಪೆಟ್ರೋಲ್ ದರ 104.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.67 ರೂಪಾಯಿ ದಾಖಲಾಗಿದೆ. ಮೈಸೂರಿನಲ್ಲಿ ಪೆಟ್ರೋಲ್ ದರ 103.98 ರೂಪಾಯಿ, ಡೀಸೆಲ್ ದರ 88.24 ರೂಪಾಯಿ ಆಗಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.00 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.10 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಕ್ರಮವಾಗಿ 108.53 ಮತ್ತು 93.57 ರೂಪಾಯಿ ದಾಖಲಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 112.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.69 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 110.05 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 97.11 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 99.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.79 ರೂಪಾಯಿ ನಿಗದಿಯಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.98 ಮತ್ತು ಲೀಟರ್ ಡೀಸೆಲ್ ದರ 90.57 ರೂಪಾಯಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

Published On - 8:11 am, Sun, 27 March 22

Web contact

TV9 Kannada

Read More
Follow Us