AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

Petrol Diesel Price Today, 28-03-2022: ಮಾರ್ಚ್ 22 ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 28, ಸೋಮವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 30 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 35 ಪೈಸೆ ಏರಿಕೆ ಮಾಡಲಾಗಿದೆ.

Petrol Diesel Price Hike: ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 28, 2022 | 7:22 AM

Share

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 28, ಸೋಮವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 30 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 35 ಪೈಸೆ ಏರಿಕೆ ಮಾಡಲಾಗಿದೆ. ಅದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.41 ರೂಪಾಯಿ, ಲೀಟರ್ ಡೀಸೆಲ್ ಬೆಲೆ 90.44 ರೂಪಾಯಿ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 31 ಪೈಸೆ ಹೆಚ್ಚಳ ಮಾಡಲಾಗಿದ್ದು, ಲೀಟರ್ ಡೀಸೆಲ್ ಬೆಲೆ 37 ಪೈಸೆ ಹೆಚ್ಚಳವಾಗಿದೆ. ಅದರ ಅನ್ವಯ ಮುಂಬೈ ಲೀಟರ್ ಪೆಟ್ರೋಲ್ 114.19 ರೂಪಾಯಿ ಹಾಗೂ ಡೀಸೆಲ್ 98.50 ರೂಪಾಯಿ ಆಗಿದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಇಂದು ಪೆಟ್ರೋಲ್ 32 ಪೈಸೆ ಏರಿಕೆ, ಲೀಟರ್ ಡೀಸೆಲ್ 35 ಪೈಸೆ ಏರಿಕೆ ಆಗಿದೆ. ಅದರಂತೆ, ಲೀಟರ್ ಪೆಟ್ರೋಲ್ ದರ 104.78 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ದಾಖಲಾಗಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.33 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಕ್ರಮವಾಗಿ 108.85 ಮತ್ತು 93.92 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಇದನ್ನೂ ಓದಿ: ಭಾರತದ ಕಾನೂನುಬದ್ಧ ಇಂಧನ ವಹಿವಾಟನ್ನು ರಾಜಕೀಯಗೊಳಿಸಬಾರದು; ರಷ್ಯಾದಿಂದ ತೈಲ ಖರೀದಿ ಬಗ್ಗೆ ಮೂಲಗಳ ಹೇಳಿಕೆ

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು