AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Hike: ಸತತ 7 ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

Petrol Diesel Price Today, 29-03-2022: ಮಾರ್ಚ್ 22 ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 29, ಮಂಗಳವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 75 ಪೈಸೆ ಏರಿಕೆ ಮಾಡಲಾಗಿದೆ.

Petrol Diesel Price Hike: ಸತತ 7 ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 29, 2022 | 6:58 AM

Share

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 29, ಮಂಗಳವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ ₹ 100.21 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91.47 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ 85 ಪೈಸೆ, ಡೀಸೆಲ್ 75 ಪೈಸೆ ಏರಿಕೆ ಕಂಡಿದೆ. ಪೆಟ್ರೋಲ್ $ 115.04, ಡೀಸೆಲ್ ₹ 99.25ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ 76 ಪೈಸೆ, ಡೀಸೆಲ್ 67 ಪೈಸೆ ಏರಿಕೆಯಾಗಿದೆ. ಲೀಟರ್ ಪೆಟ್ರೋಲ್ ₹ 105.94, ಡೀಸೆಲ್ ₹ 96 ತಲುಪಿದೆ. ಕೋಲ್ಕತ್ತಾಲಲ್ಲಿ ಲೀಟರ್ ಪೆಟ್ರೋಲ್ 83 ಪೈಸೆ, ಡೀಸೆಲ್ 70 ಪೈಸೆ ಏರಿಕೆಯಾಗಿದೆ. ಲೀಟರ್ ಪೆಟ್ರೋಲ್ ₹ 109.68, ಡೀಸೆಲ್ ₹ 94.62 ತಲುಪಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ₹ 105.62 ಮತ್ತು ಡೀಸೆಲ್ ₹ 89.70, ಹೈದರಾಬಾದ್​ನಲ್ಲಿ ಪೆಟ್ರೋಲ್ ₹ 113.61, ಡೀಸೆಲ್ ₹ 99.84 ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 7ನೇ ದಿನದ ಬೆಲೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ಪೆಟ್ರೋಲ್ ಟ್ಯಾಂಕರ್​ ಒಳಗೆ ಬೇಬಿ ಟ್ಯಾಂಕರ್, ಸರ್ಕಾರಕ್ಕೆ ಭಾರಿ ವಂಚನೆ: ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಟ್ಯಾಂಕರ್ ಅವ್ಯವಹಾರ

ಇದನ್ನೂ ಓದಿ: ಭಾರತದ ಕಾನೂನುಬದ್ಧ ಇಂಧನ ವಹಿವಾಟನ್ನು ರಾಜಕೀಯಗೊಳಿಸಬಾರದು; ರಷ್ಯಾದಿಂದ ತೈಲ ಖರೀದಿ ಬಗ್ಗೆ ಮೂಲಗಳ ಹೇಳಿಕೆ

Published On - 6:57 am, Tue, 29 March 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ