Petrol Diesel Price Hike: ಸತತ 8ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ವಾರದಲ್ಲಿ 5 ರೂಪಾಯಿಗೂ ಹೆಚ್ಚು ಹೆಚ್ಚಳ

Petrol Diesel Price Today, 30-03-2022: ಮಾರ್ಚ್ 23ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 29, ಮಂಗಳವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್​ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್​ಗೆ 75 ಪೈಸೆ ಏರಿಕೆ ಮಾಡಲಾಗಿದೆ.

Petrol Diesel Price Hike: ಸತತ 8ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ವಾರದಲ್ಲಿ 5 ರೂಪಾಯಿಗೂ ಹೆಚ್ಚು ಹೆಚ್ಚಳ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 30, 2022 | 7:52 AM

Petrol Diesel Price Today | ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 30, ಮಂಗಳವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 80 ಪೈಸೆ ಹೆಚ್ಚಿಸಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ಕಳೆದ 9 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 5.60 ಹೆಚ್ಚಾಗಿದೆ.

ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ ₹ 101.01 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆಯೂ 80 ಪೈಸೆ ಏರಿಕೆಯಾಗಿದ್ದು, ಬೆಲೆ ₹ 92.27 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ 84 ಪೈಸೆ, ಡೀಸೆಲ್ 85 ಪೈಸೆ ಏರಿಕೆ ಕಂಡಿದೆ. ಪೆಟ್ರೋಲ್ ₹ 115.88, ಡೀಸೆಲ್ ₹ 100.10ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ 75 ಪೈಸೆ, ಡೀಸೆಲ್ 76 ಪೈಸೆ, ಕೊಲ್ಕತ್ತಾದಲ್ಲಿ ಪೆಟ್ರೋಲ್ 86 ಪೈಸೆ, ಡೀಸೆಲ್ 80 ಪೈಸೆ ಏರಿಕೆಯಾಗಿದೆ.

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 8ನೇ ದಿನದ ಬೆಲೆ ಏರಿಕೆಯಾಗಿದೆ.

ಮೊದಲ ನಾಲ್ಕು ದಿನಗಳಲ್ಲಿ ಇಂದನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30 ಪೈಸೆಯಷ್ಟು ಹೆಚ್ಚಿಸಲಾಯಿತು. ಡೀಸೆಲ್ ಬೆಲೆಯು 55 ಮತ್ತು 35 ಪೈಸೆಯಷ್ಟು ಹೆಚ್ಚಾಗಿತ್ತು. ನಿನ್ನೆ (ಮಾರ್ಚ್ 29) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 80 ಮತ್ತು 70 ಪೈಸೆಯಷ್ಟು ಹೆಚ್ಚಿಸಲಾಯಿತು. ಈವರೆಗಿನ ಸರಾಸರಿ ಲೆಕ್ಕಹಾಕಿದರೆ ಕಳೆದ 9 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ₹ 5.60ರಷ್ಟು ಹೆಚ್ಚಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: Petrol Diesel Price Hike: ಸತತ 7 ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

ಇದನ್ನೂ ಓದಿ: ಭಾರತದ ಕಾನೂನುಬದ್ಧ ಇಂಧನ ವಹಿವಾಟನ್ನು ರಾಜಕೀಯಗೊಳಿಸಬಾರದು; ರಷ್ಯಾದಿಂದ ತೈಲ ಖರೀದಿ ಬಗ್ಗೆ ಮೂಲಗಳ ಹೇಳಿಕೆ

Published On - 7:19 am, Wed, 30 March 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!